ತಿಪಟೂರು: ಬಿಜೆಪಿ ಅಭ್ಯರ್ಥಿ ಬಿ.ಸಿ.ನಾಗೇಶ್ ಪರ ಪ್ರಚಾರಕ್ಕೆ ಆಗಮಿಸಿದ್ದ ಯಡಿಯೂರಪ್ಪನವರಿಗೆ ಹಾರ ಕೂಡ ಹಾಕದೇ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದು, ಯಡಿಯೂರಪ್ಪನವರನ್ನು ಚುನಾವಣಾ ಅಸ್ತ್ರವಾಗಿ ಮಾತ್ರವೇ ಬಿಜೆಪಿ ಬಳಕೆ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ತಿಪಟೂರು ನಗರದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಕೆ.ಷಡಕ್ಷರಿ ಮತ್ತು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ಸಿ.ನಾಗೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ತಿಪಟೂರಿಗೆ ಪ್ರಚಾರಕ್ಕೆ ಆಗಮಿಸಿದ್ದ ಯಡಿಯೂರಪ್ಪನವರಿಗೆ ಹಾರ ಕೂಡ ಹಾಕದೇ ಅವಮಾನಿಸಲಾಗಿದೆ. ಯಡಿಯೂಪ್ಪನವರು ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರೂ, ಲಿಂಗಾಯತ ಮತಗಳನ್ನು ಸೆಳೆಯುವ ಉದ್ದೇಶದಿಂದ ಯಡಿಯೂರಪ್ಪನವರನ್ನು ಹೈಕಮಾಂಡ್ ಒತ್ತಡ ಹೇರಿ ತಿಪಟೂರಿಗೆ ಕರೆಸಿಕೊಂಡಿದೆ ಎಂದು ಆರೋಪಿಸಿದರು.
ಬಿ.ಸಿ.ನಾಗೇಶ್ ಅವರು, ಯಡಿಯೂರಪ್ಪನವರಿಗೆ ಚೀಟಿ ಬರೆದುಕೊಟ್ಟು ತನ್ನನ್ನು ಭಾಷಣದಲ್ಲಿ ಹೊಗಳುವಂತೆ ಭಾಷಣ ಮಾಡಿಸಿಕೊಂಡಿದ್ದಾರೆ. ಆದರೆ ರೋಡ್ ಶೋ ಕೂಡ ಮಾಡದೇ ಯಡಿಯೂರಪ್ಪ ಭಾಷಣ ಮುಗಿಸಿ ಹೊರಟುಹೋಗಿದ್ದಾರೆ ಎಂದು ಅವರು ಆರೋಪಿಸಿದರಲ್ಲೇ ವೀರಶೈವ ಸಮಾಜದವರು ಬಿ.ಸಿ.ನಾಗೇಶ್ ಗೆ ಮತ ಹಾಕಬಾರದು ಎಂದು ಕಿಡಿಕಾರಿದರು.
ಇದೇ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಷಡಕ್ಷರಿ, ನಾನು ಶಾಸಕನಾಗಿದ್ದಾಗ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಿಸಿದ್ದೆ. ನನ್ನ ಅವಧಿಯಲ್ಲಾದಷ್ಟು ಅಭಿವೃದ್ಧಿ ಕೆಲಸಗಳನ್ನು ನಾಗೇಶ್ ಮಾಡಿಸಿಲ್ಲ. ಹಾಸ್ಯ ನಟ ನರಸಿಂಹರಾಜ್ ಭವನ ಸೇರಿದಂತೆ ಎಲ್ಲಾ ಕಟ್ಟಡಗಳು ಅರ್ಧಕ್ಕೆ ನಿಂತಿವೆ. ಹಲವಾರು ಕಾಮಗಾರಿಗಳು ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಡೆನೂರು ವಿನಯ್, ಲೋಕನಾಥ್ ಸಿಂಗ್, ವಕೀಲ ನಟರಾಜ್ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy