ಟೀಂ ಇಂಡಿಯಾ ತಂಡ ಕೋಟ್ಯಾಂತರ ಭಾರತೀಯರ ಕನಸನ್ನು ನನಸುಮಾಡುವ ಮೂಲಕ, ತನ್ನ ಕನಸಾದ ಐಸಿಸಿ ಟಿ20 ವಿಶ್ವಕಪ್ ಗೆಲ್ಲೋದನ್ನು ನನಸಾಗಿಸಿಕೊಂಡಿದೆ. ಹೌದು, ಬಾರ್ಬಡೊಸ್ ನ ಬ್ರಿಡ್ಜ್’ಟೌನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ 7 ರನ್‌ಗಳಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಹೀಗಾಗಿ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಇದೀಗ BCCI ಭರ್ಜರಿ ಗಿಫ್ಟ್ ನೀಡಿದೆ.
ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಭರ್ಜರಿಯಾದ ಸ್ವಾಗತ ನೀಡಿದೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ತಂಡವು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಸಂಭ್ರಮವನ್ನು ಹಂಚಿಕೊಂಡಿದೆ. ಬಳಿಕ ಗೆಲುವಿನ ಪರೇಡ್ ಹಾಗೂ ವಾಂಖೆಡೆ ಸ್ಟೇಡಿಯಂನಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಭೂತಪೂರ್ವ ಸಾಧನೆ ಗೈದ ಇಂಡಿಯಾದ ಆಟಗಾರರಿಗೆ BCCI 125 ಕೋಟಿಯ ಚೆಕ್ ಅನ್ನು ವಿತರಿಸಿದೆ.
ಬಿಸಿಸಿಐ ತಾನು ಘೋಷಣೆ ಮಾಡಿದ್ದ 125 ಕೋಟಿ ರೂಪಾಯಿಯ ಬಹುಮಾನ ಮೊತ್ತದ ಚೆಕ್‌ಅನ್ನು ವಿಶ್ವಕಪ್ ವಿಜೇತ ತಂಡಕ್ಕೆ ಹಸ್ತಾಂತರ ಮಾಡಿತು. ಈ ವೇಳೆ ಬಿಸಿಸಿಐ ಅಧಿಕಾರಿಗಳು ಉಪಸ್ಥಿತರಿದ್ದರು.
ಇದರ ಬಳಿಕ ಟ್ರೋಫಿ ಗೆದ್ದ ತಂಡದ ಆಟಗಾರರು ವಂದೇ ಮಾತರಂ ಹಾಡಿಗೆ ಇಡೀ ಮೈದಾನದ ಸುತ್ತ ವಿಕ್ಟರಿ ಲ್ಯಾಪ್ ಮಾಡಿತು. ಸ್ಟೇಡಿಯಂನಲ್ಲಿ ನೆರೆದಿದ್ದ ಅಪಾರ ಜನಸ್ತೋಮ ವಿಜೇತ ತಂಡದ ಆಟಗಾರರ ಹೆಸರು ಕೂಗಿ ಸಂಭ್ರಮಿಸಿದರು. ಭಾರತ ಗೆದ್ದದ್ದಕ್ಕೆ ದರ್ಶನ್ ಗೆ ಧನ್ಯವಾದ ತಿಳಿಸಿದ ನೆಟ್ಟಿಗರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA