ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಾಡಪ್ರಭು ಕೆಂಪೇಗೌಡ ಹಾಗೂ ಉದ್ದೇಶಿತ ಎಂಎ ಆರ್ ಗೆ ಭೂ ಸ್ವಾಧೀನ ಪಡಿಸಿಕೊಂಡಿರುವ ಪ್ರದೇಶದಲ್ಲಿ, ಕಂದಾಯ ನಿವೇಶನದಾರರು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಸುಮಾರು 5 ಎಕರೆ ಜಮೀನನ್ನು ತೆರವುಗೊಳಿಸಿ ತನ್ನ ವಶಕ್ಕೆ ಪಡೆದಿದೆ.
ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ, ಚಲ್ಲಘಟ್ಟ ಗ್ರಾಮದ ಸರ್ವೇ ನಂ. 4 ಮತ್ತು 8 ಅನ್ನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಸ್ವಾಧೀನಕ್ಕೆ ತೆಗೆದುಕೊಳ್ಳಲಾಗಿತ್ತು.


