ಮೂಡುಬಿದಿರೆ: ಗ್ಯಾಸ್ ಗೀಸರ್ ಬಳಸುವ ಮುನ್ನ ಸಾರ್ವಜನಿಕರು ಎಚ್ಚರವಾಗಿರಬೇಕು. ಯಾಕಂದ್ರೆ ಸ್ವಲ್ಪ ಯಾಮಾರಿದ್ರೂ ದೊಡ್ಡ ಅವಘಡವೇ ಸಂಭವಿಸಬಹುದು. ಇಂತಹದ್ದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ.
ಇಲ್ಲಿನ ಕೋಟೆಬಾಗಿಲಿನ ಫ್ಯ್ಲಾಟ್ ನಲ್ಲಿ ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ವರದಿಗಳಿಂದ ತಿಳಿದು ಬಂದಿದೆ.
ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದು, ಸಾಕಷ್ಟು ಹೊತ್ತಾದ್ರೂ ಮರಳಿ ಬಂದಿರಲಿಲ್ಲ. ಬಾತ್ ರೂಮ್ ಬಾಗಿಲು ಬಡಿದು ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೇ ಹೋದಾಗ ಬಾತ್ ರೂಮ್ ಬಾಗಿಲು ಮುರಿದು ನೋಡಿದಾಗಿ ಘಟನೆ ಬೆಳಕಿಗೆ ಬಂದಿದೆ.
ಮೃತ ಶಾರಿಕ್ ದ್ವಿತೀಯ ಪಿಯು ಮುಗಿಸಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA