ದೇಹ ಬಲಾಢ್ಯಗಾಗಿ ಪ್ರೋಟೀನ್ ಪೌಡರ್ ಬಳಸುವ ಮುನ್ನ ಎಚ್ಚರ.. ICMR ವರದಿಯಲ್ಲಿ ಅಚ್ಚರಿ ವಿಷಯ ಬಹಿರಂಗವಾಗಿದೆ. 13 ವರ್ಷದ ಬಳಿಕ ICMR ಭಾರತೀಯರ ಫುಡ್ ಡಯಟ್ರಿ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಪ್ರೋಟಿನ್ ಪೌಡರ್ ಬಳಕೆದಾರರನ್ನು ಅಚ್ಚರಿ ಮೂಡಿಸುವ ಅಂಶಗಳನ್ನು ವರದಿ ನೀಡಿದೆ.
ಜಿಮ್, ಸ್ಪೋರ್ಟ್ ಗಳಲ್ಲಿ ತೊಡಗಿಕೊಂಡಿರುವ ಯುವಕ ಯುವತಿಯರಂತೂ ಪ್ರೋಟೀನ್ ಹೆಸರಿನಲ್ಲಿ ಸ್ಲೋ ಪಾಯಿಸನ್ ಸೇವನೆ ಮಾಡುತ್ತಿದ್ದು, ಜೀವಕ್ಕೆ ಕುತ್ತು ತಂದು ಕೊಳ್ಳುತ್ತಿದ್ದಾರೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೇಳಿದೆ.
ಅತಿಯಾದ ಪ್ರೋಟಿನ್ ಪೌಡರ್ ಸೇವನೆಯಿಂದ ಜೀವಕ್ಕೆ ಅಪಾಯವಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದೆ. ಭಾರತದಲ್ಲಿ ಅತಿ ಹೆಚ್ಚು ಚೀಪ್ ಪ್ರೋಟಿನ್ ಪೌಡರ್‌ಗಳು ಮಾರಟವಾಗುತ್ತಿದ್ದು ಅದರಲ್ಲಿ ಸಕ್ಕರೆ, ಸೋಡಿಯಂ, ಪೋಟ್ಯಾಷಿಯಂ ಸೇರಿದಂತೆ ಹಲವು ಕೆಮಿಕಲ್ ಅಂಶಗಳು ಹೆಚ್ಚಾಗಿ ಪತ್ತೆಯಾಗಿದ್ದು, ಆರೋಗ್ಯದ ದುಷ್ಪರಿಣಾಮ ಬೀರುತ್ತಿದೆ.
ಭಾರತದಲ್ಲಿ ನೆಲೆಯೂರಿರುವ ಅನೇಕ ಚೀಪ್ ಬ್ರಾಂಡ್ ಪ್ರೋಟಿನ್ ಪೌಡರ್ಗಳಲ್ಲಿ ಜೀವಕ್ಕೆ ಕುತ್ತು ತರುವಂತಹ ಅನೇಕ ಕೆಮಿಕಲ್ ಬಳಕೆ ಮಾಡಲಾಗುತ್ತಿದೆ. ಹೆಚ್ಚಾಗಿ ಸಕ್ಕರೆ ಅಂಶಗಳು ಪ್ರೋಟಿನ್ ಪೌಡರ್ಗಳಲ್ಲಿ ಬಳಕೆ ಮಾಡಲಾಗುತ್ತಿದ್ದು ಇದರಿಂದ ಡಯಾಬಿಟಿಸ್ ನಂತಹ ಸಮಸ್ಯೆಗಳು ಬರುವ ಸಾಧ್ಯತೆ ಇದೆ ಎಂಬ ವರದಿ ಬಹಿರಂಗವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA