ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ, ಎಲ್.ಎಸ್. ಚೇತನ್ ಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ. 15 ದಿನ ಅಥವಾ ತಿಂಗಳಿಗೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆಂದು ಹೇಳಿದರು.
ಬಿಜೆಪಿ-ಜೆಡಿಎಸ್ ಪಕ್ಷದ ಹಾಲಿ ಶಾಸಕರೂ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಶಾಸಕರ ಸೇರ್ಪಡೆ ಬಗ್ಗೆ ಬಹಿರಂಗ ಹೇಳಿಕೆ ನೀಡಲಾಗದು. ನಿಮ್ಮನ್ನು ಬಿಟ್ಟು ಏನೂ ಮಾಡುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಗಳು, ತಾಲ್ಲೂಕು ಪಂಚಾಯತ್ಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಮುಂಬರುವ ಚುನಾವಣೆಗಳಿಗೆ ಪಕ್ಷವು ಸಂಪೂರ್ಣವಾಗಿ ಸಿದ್ಧವಾಗಬೇಕು ಎಂದು ಇದೇ ವೇಳೆ ಡಿ.ಕೆ.ಶಿವಕುಮಾರ್ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4