ದಕ್ಷಿಣಕನ್ನಡ: ಕಾಡಾನೆಯ ದಾಳಿಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದ ಘಟನೆ ಸೋಮವಾರ ಬೆಳ್ಳಂ ಬೆಳಗ್ಗೆ ನಡೆದಿದ್ದು, ಯುವತಿ ಸೇರಿದಂತೆ ಇಬ್ಬರು ಕಾಡಾನೆಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಎಂಬ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಮೃತ ಯುವತಿ ರಂಜಿತಾ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದಳು ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಣೆಗಾಗಿ ಸ್ಥಳಕ್ಕೆ ಬಂದ ರಮೇಶ್ ಅವರ ಮೇಲೆಯೂ ಕಾಡಾನೆ ದಾಳಿ ನಡೆಸಿದೆ.
ಕಾಡಾನೆಯ ದಾಳಿಗೆ ರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ರಂಜಿತಾ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈ ಭಾಗದಲ್ಲಿ ಹಲವು ತಿಂಗಳುಗಳಿಂದ ಕಾಡಾನೆ ಓಡಾಡವಿದ್ದು, ಈ ಬಗ್ಗೆ ಅರಣ್ಯ ಇಲಾಖೆಯ ತೀವ್ರ ನಿರ್ಲಕ್ಷ್ಯದಿಂದಾಗಿ ಇದೀಗ ಎರಡು ಅಮಾಯಕ ಜೀವ ಬಲಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


