ತುರುವೇಕೆರೆ: ಪಟ್ಟಣದ ಬೀದಿ ಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಒತ್ತಾಯಿಸಿ ವ್ಯಾಪಾರಿಗಳು ಆಹೋರಾತ್ರಿ ಧರಣಿ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಮಸಾಲ ಜಯರಾಮ್, ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಲು ತೀರ್ಮಾನ ಕೈಗೊಂಡಿದ್ದಾರೆ.
ಪಟ್ಟಣ ಪಂಚಾಯಿತಿ ಅನುದಾನ ಮತ್ತು ಶಾಸಕರ ನಿಧಿ ಬಳಕೆ ಮಾಡಿಕೊಂಡು ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನು ಬೀದಿಬದಿ ವ್ಯಾಪಾರಿಗಳಿಗೆ ಸ್ಥಿರವಾಗಿ ಅಂಗಡಿ ಮುಂಗಟ್ಟು ಗಳನ್ನು ಮಾಡಲು ಶಾಸಕರು ತೀರ್ಮಾನ ಕೈಗೊಂಡಿದ್ದು, ಶಾಸಕರ ತೀರ್ಮಾನಕ್ಕೆ ವ್ಯಾಪಾರಿಗಳ ಸಂಘದ ಅಧ್ಯಕ್ಷರು ಮತ್ತು ವ್ಯಾಪಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
15 ದಿನಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ಮಸಾಲ ಜಯರಾಮ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಯಾದ ರೇಣು ಕುಮಾರ್, ಕೊಂಡಜ್ಜಿ ವಿಶ್ವನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಸಿಬ್ಬಂದಿ ವರ್ಗಗಳು ಸ್ಥಳದಲ್ಲಿ ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz