ಹಿರಿಯೂರು: ವೃತ್ತಿ ಖಾಯಂ ಮಾಡುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಿರಿಯೂರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಅಂಗನವಾಡಿ ಫೆಡರೇಶನ್ ಎಐಟಿಯುಸಿಯ ತಾಲ್ಲೂಕು ಅಧ್ಯಕ್ಷರಾದ ಬಿ ಪಿ ನಿರ್ಮಲಾ ಹಾಗೂ ಗೌರವ ಅಧ್ಯಕ್ಷರಾದ ಎಸ್ ಪಿ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇವಾಭತ್ಯೆ , ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಲಾಡ್ಜ್ ಬಳಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿ ಸರ್ಕಲ್ ನಿಂದ ಸಾಗಿ ಹಿರಿಯೂರು ತಾಲ್ಲೂಕು ಕಛೇರಿ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆಯ ಉದ್ದಕ್ಕೂ ಸರ್ಕಾರವ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಪ್ರತಿಭಟನೆಯ ಬಳಿಕ ನಮ್ಮ ತುಮಕೂರು ಜೊತೆಗೆ ಮುಖಂಡರಾದ ಕ್ರಿಷ್ಟಿ ಜೌನಿತ ಶಿಭ, ತಾಲ್ಲೂಕು ಅಧ್ಯಕ್ಷರಾದ ಬಿ ಪಿ ನಿರ್ಮಲ,ಎಸ್ ಸಿ ಕುಮಾರ್ ಮಾತನಾಡಿ, 46 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸದ ಭದ್ರತೆ, ಕನಿಷ್ಠ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಪಿಂಚಣಿ, ಭವಿಷ್ಯ ನಿಧಿ, ಗ್ರಾಚ್ಯುಯಿಟಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಬೇಡಿಕೆ ಈಡೇರಿಸಲು ಕೋರಿ ನೂರಾರು ಪ್ರತಿಭಟನೆ, ಮುಷ್ಕರ ನಡೆಸಿದರೂ ಪ್ರಯೋಜನಕಾರಿಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರನ್ನು, ಸಹಾಯಕಿಯರನ್ನು ವಿವಿಧ ಕಾರ್ಯಕ್ರಮಗಳಲ್ಲಿ ಮನಬಂದಂತೆ ಬಳಸಿಕೊಳ್ಳುತ್ತಿದೆ. ಆದರೆ, ಅವರಿಗೆ ಕನಿಷ್ಠ ವೇತನ ಕೂಡ ನೀಡುತ್ತಿಲ್ಲ. ಮೂಲಕ ಸರ್ಕಾರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮಾತ್ರವಲ್ಲದೇ ಮಹಿಳಾ ವಿರೋಧಿ ನೀತಿ ತಾಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು. ಎಲ್ ಕೆ ಜಿ ಮತ್ತು ಯು ಕೆ ಜಿ ಮಕ್ಕಳಿಗೆ ಅಂಗನವಾಡಿಯಲ್ಲೇ ತರಗತಿಗಳನ್ನು ತೆರೆಯಬೇಕು. ಅಂಗನವಾಡಿಯಿಂದ ಬೇರೆ ಶಾಲೆಗೆ ಹೋಗುವಾಗ ವರ್ಗಾವಣೆ ಪತ್ರದ ವ್ಯವಸ್ಥೆ ಕಲ್ಪಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿ ಎಂದು ಪರಿಗಣಿಸಬೇಕು. ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ನೀಡಬೇಕು. ನಮ್ಮನ್ನು ಸಹ ಶಿಕ್ಷಕಿಯಾಗಿ ಪರಿಗಣಿಸಿ ಸೇವೆ ಖಾಯಂಗೊಳಿಸಿ ಜೀವನಕ್ಕೆ ಭದ್ರತೆ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿ.ಪಿ.ನಿರ್ಮಲ , ಎಸ್.ಸಿ.ಕುಮಾರ್ , ಜಯಮ್ಮ ಹೆಚ್. , ಇ.ಕೆಂಚಮ್ಮ, ಚಿಂತಾಮಣಿ, ಕೆ.ಕೆಂಚಮ್ಮ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


