ಬಿಯರ್ ಬಾಟಲ್ ಮೇಲೆ 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಮರ ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಮಧ್ಯಪ್ರದೇಶದ ರಾಜ್ ಗಢ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಗಢ್ ಜಿಲ್ಲೆಯ ನಿವಾಸಿ ಬ್ರಿಜ್ ಮೋಹನ್ ಶಿವಹರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೆಂದು ತಿಳಿದು ಬಂದಿದೆ.
ಮಧ್ಯಪ್ರದೇಶ ರಾಜ್ಯ ಸರ್ಕಾರವು 100 ಇರುವ ಮದ್ಯದ ಮೇಲೆ 20 ರೂ. ಹಾಗೂ ಬಿಯರ್ ಬಾಟಲ್ ಗೆ 30 ರೂ. ಹೆಚ್ಚಳ ಮಾಡಿದೆ. ಒಟ್ಟು 50 ರೂ. ಹೆಚ್ಚುವರಿ ಶುಲ್ಕ ವಿಧಿಸಿದಂತೆ ಆಗಿದೆ. ಇದನ್ನು ಪ್ರಶ್ನಿಸಿ ಬ್ರಿಜ್ ಮೋಹನ್ ಮುಖ್ಯಮಂತ್ರಿ ಸಹಾಯವಾಣಿ, ಜಿಲ್ಲಾಧಿಕಾರಿಗಳಿಗೆ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಫೆಬ್ರವರಿ ತಿಂಗಳಿನಲ್ಲಿಯೇ ದೂರು ನೀಡಿದ್ದರು. ಏಕಾಏಕಿ ಮದ್ಯದ ಬೆಲೆ ಏರಿಕೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ.
ಮದ್ಯದ ಹೆಚ್ಚುವರಿ ಶುಲ್ಕ ವಿಚಾರವಾಗಿ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲವೆಂದು ಬೇಸರಗೊಂಡಿದ್ದ ಬ್ರಿಜ್ ಮೋಹನ್, ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹರಸಾಹಸಪಟ್ಟು ಬ್ರಿಜ್ ಮೋಹನ್ ನನ್ನು ಮರದಿಂದ ಕೆಳಗಿಳಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


