ಬೆಳಗಾವಿ: ಸೆಪ್ಟೆಂಬರ್ 2025ರವರೆಗೆ ರಾಜ್ಯದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದಾರೆ.
ವಿಧಾನ ಪರಿಷತ್ತಿನ ನಿಯಮ 330ರ ಅಡಿಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಮತ್ತು ಎಂಎಲ್ ಸಿ ಕೆ.ಎಸ್.ನವೀನ್ ಈ ಬಗ್ಗೆ ಪ್ರಶ್ನಿಸಿದ್ದು, ಇದಕ್ಕೆ ಸಚಿವರು ಲಿಖಿತ ಉತ್ತರ ನೀಡಿದರು.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದ್ಯ ಸೇವಿಸುತ್ತಿರುವವರು ಲಿವರ್ ಸಿರೋಸಿಸ್/ಕಾಮಾಲೆಯಿಂದ ಬಳಲುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಅಬಕಾರಿ ಇಲಾಖೆಯ ಆದಾಯದ ಕನಿಷ್ಠ 20 ಪ್ರತಿಶತವನ್ನು ಅವರ ಉತ್ತಮ ಚಿಕಿತ್ಸೆಗಾಗಿ ಹಂಚಿಕೆ ಮಾಡಬೇಕೆಂದು ಪ್ರಸ್ತಾಪಿಸಿದರು.
ಅಬಕಾರಿ ಇಲಾಖೆಯಿಂದ ಬರುವ ಆದಾಯವನ್ನು ರಾಜ್ಯದ ಕ್ರೋಢೀಕೃತ ನಿಧಿಯಲ್ಲಿ ಠೇವಣಿ ಇಡಲಾಗುತ್ತದೆ. ಯಾವುದೇ ಉದ್ದೇಶಕ್ಕಾಗಿ ಹಣವನ್ನು ಮೀಸಲಿಡಲು ಯಾವುದೇ ನಿರ್ದಿಷ್ಟ ವ್ಯವಸ್ಥೆ ಇಲ್ಲ. ಹೀಗಾಗಿ ಬಜೆಟ್‌ನಲ್ಲಿ ಅನುಮೋದಿಸಲಾದ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗುತ್ತದೆ ಎಂದು ತಿಮ್ಮಾಪುರ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


