ಬೆಳಗಾವಿ: ಬೆಳಗಾವಿ ಮತ್ತು ಮಹಾರಾಷ್ಟ್ರದ ನೆರೆಯ ಕಾಗಲ್ ತಾಲ್ಲೂಕಿನಿಂದ ಕುರುಬ ಕುಟುಂಬಗಳ ಇಬ್ಬರು ಯುವಕರು ಕುರಿ ಕಾಯುತ್ತಲೇ ಯುಪಿಎಸ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್ ಗಳೊಂದಿಗೆ ಉತ್ತೀರ್ಣರಾಗಿದ್ದಾರೆ.
ಬೆಳಗಾವಿಯ ನಾನಾವಾಡಿಯಲ್ಲಿ ವಾಸವಿರುವ ಮಹಾರಾಷ್ಟ್ರದ ಎಮಗೆ ಗ್ರಾಮದ ಬೀರಪ್ಪ ಸಿದ್ದಪ್ಪ ಡೋಣಿ ದೇಶಕ್ಕೆ 551 ನೇ ರ‍್ಯಾಂಕ್ ಗಳಿಸಿದ್ದರೆ, ಬೆಳಗಾವಿಯ ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಅವರು 910 ನೇ ರ‍್ಯಾಂಕ್ ಗಳಿಸಿದ್ದಾರೆ.
ಮಹಾರಾಷ್ಟ್ರದ ಕಾಗಲ್ ತಾಲ್ಲೂಕಿನ ನೆರೆಯ ಎಮಗೆ ಗ್ರಾಮದ ಸಿದ್ದಪ್ಪ ಮತ್ತು ಬಾಲವ್ವ ಡೋಣಿ ಅವರ ಮೂರನೇ ಮಗ ಬೀರಪ್ಪ. ಬೀರಪ್ಪ ತನ್ನ ಕುರಿಗಳನ್ನು ಮೇಯಿಸುತ್ತಿದ್ದಾಗಲೇ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಬಂದಿದೆ. ತಾವು ಐಎಎಸ್ ಪಾಸ್ ಮಾಡಿರುವ ಸುದ್ದಿ ಕೇಳಿ ಸಂಭ್ರಮಿಸಿದರು.
ಕುರಿಗಳನ್ನು ಮೇಯಿಸುತ್ತಾ ಯುಪಿಎಸ್ ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬೀರಪ್ಪ ಅವರು ಮೂರನೇ ಪ್ರಯತ್ನದಲ್ಲಿ ಯುಪಿಎಸ್ ಸಿ ಪರೀಕ್ಷೆ ಪಾಸ್ ಮಾಡಿದ್ದಾರೆ. ಅವರ ಈ ಸಾಧನೆ ಅವರ ಕುಟುಂಬ ಮತ್ತು ಗ್ರಾಮಸ್ಥರಿಗೆ ಬಹಳ ಸಂತೋಷ ತಂದಿದೆ.
ಇನ್ನು ಯರಗಟ್ಟಿ ತಾಲ್ಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಸುದ್ದಿ ತಿಳಿದು ಕೋಳಿವಾಡ ಗ್ರಾಮಸ್ಥರು ಸಂಭ್ರಮಿಸಿದರು. ಅವರ ತಂದೆ ಯಲ್ಲಪ್ಪ, ತಾಯಿ ಕಾಳವ್ವ, ಪತ್ನಿ ಯಶೋಧ, ಸಹೋದರ ಆನಂದ್ ಮತ್ತು ಇತರ ಕುಟುಂಬ ಸದಸ್ಯರು ಹರ್ಷ ವ್ಯಕ್ತಪಡಿಸಿದರು.ಹ ನುಮಂತ ಅವರ ಸಾಧನೆಗೆ ಇಡೀ ಗ್ರಾಮವೇ ಹೆಮ್ಮೆ ಪಡುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW