ಬೆಂಗಳೂರು: ದೀಪಾವಳಿಯಂದು ಪಟಾಕಿ ಸಿಡಿಸುವವರು ರಾತ್ರಿ 8ರಿಂದ 10 ಗಂಟೆಯೊಳಗೆ ಪಟಾಕಿ ಸಿಡಿಸಬೇಕಿದೆ. ರಾತ್ರಿ 10 ಗಂಟೆಯ ನಂತರ ಪಟಾಕಿ ಸಿಡಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ.
ಈ ಬಗ್ಗೆ ಎಚ್ಚರಿಕೆ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪರಿಸರ ಮಾಲಿನ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಟಾಕಿ ಸಿಡಿಸಿದರೆ ಅಗತ್ಯ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರದಲ್ಲಿ ಕೇವಲ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಲಾಗಿದೆ. ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದಾಗಿದೆ. ಒಂದು ವೇಳೆ ರಾತ್ರಿ 10 ಗಂಟೆ ನಂತರವೂ ಪಟಾಕಿ ಸಿಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಮನಸ್ಸೋ ಇಚ್ಚೆ ಪಟಾಕಿ ಸಿಡಿಸುವುದಕ್ಕೆ ಕಡಿವಾಣ ಹಾಕಲು ವಲಯ ಮಟ್ಟದಲ್ಲೂ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಹೀಗಾಗಿ ಪಟಾಕಿ ಅನಾಹುತಕ್ಕೆ ಕಾರಣರಾಗಿ ಹಬ್ಬದ ಆಚರಣೆಗೆ ಅಡ್ಡಿ ಮಾಡ್ಕೊಬೇಡಿ ಎಂದು ಅವರು ಸಲಹೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296