ಕೇಂದ್ರ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಹಿಂಸಾಚಾರ ಭುಗಿಲೆದಿದ್ದು ಅಗ್ನಿಕುಂಡವಾಗಿರುವ ನಡುವೆ ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಗೆ ೧೭ ಮಂದಿ ಸಾವನ್ನಪ್ಪಿದ್ದಾರೆ. “ಗುಡುಗು ಮತ್ತು ಸಿಡಿಲು ಸಹಿತ ಮಳೆಯಿಂದಾಗಿ ಭಾಗಲ್ಪುರದಲ್ಲಿ ೬, ವೈಶಾಲಿಯಲ್ಲಿ ೩, ಖಗಾರಿಯಾದಲ್ಲಿ ೨, ಕತಿಹಾರ್‌ನಲ್ಲಿ ೧, ಸಹರ್ಸಾದಲ್ಲಿ ೧, ಮಾಧೇಪುರದಲ್ಲಿ ೧, ಬಂಕಾದಲ್ಲಿ ೨ ಮತ್ತು ಮುಂಗಾರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಇದರ ಜೊತೆಗೆ ರಾಜ್ಯದ ಹಲವು ಭಾಗಗಳಲ್ಲಿ ಜಾನುವಾರುಗಳೂ ಕೂಡ ಮೃತಪಟ್ಟಿದ್ದು, ಗುಡುಗು,ಸಿಡಿಲು ಮತ್ತು ಮಳೆಯಿಂದ ಆಗಿರುವ ಹಾನಿಯನ್ನು ಅಂದಾಜು ಮಾಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾಗದಲ್ಲಿ ಬಿಹಾರ ದೇಶಾದ್ಯಂತ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಚಂಡಮಾರುತದ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಗುಜರಾತ್ ಪ್ರದೇಶ, ಮಧ್ಯಪ್ರದೇಶ, ವಿದರ್ಭದ ಹಲವು ಭಾಗಗಳು, ಛತ್ತೀಸ್‌ಗಢದ ಕೆಲವು ಭಾಗಗಳು, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಮತ್ತಷ್ಟು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಾರ್ಖಂಡ್, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗದಲ್ಲಿ ಮುಂದಿನ ಐದು ದಿನಗಳಲ್ಲಿ ಬಾರಿ ಮಳೆಯಾಗಲಿದೆ.ಜೊತೆಗೆ ಬಿಹಾರದ ಹಲವು ಭಾಗಗಳಲ್ಲಿ ಗುಡುಗು, ಮಿಂಚು, ಗಾಳಿ ಬೀಸುವ ಸಾಧ್ಯತೆ ಎಂದು ತಿಳಿಸಲಾಗಿದೆ.
೪ ಲಕ್ಷ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಮತ್ತು ಗುಡುಗು ಸಹಿತ ೧೭ ಜನರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತಪಟ್ಟ ಪ್ರತಿಯೊಬ್ಬರ ಕುಟುಂಬ ಸದಸ್ಯರಿಗೆ ತಲಾ ೪ ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ.
ಪ್ರತೀಕೂಲ ವಾತಾವರಣದಲ್ಲಿ ಜನರು ಸಂಪೂರ್ಣ ಜಾಗರೂಕರಾಗಿರಬೇಕು ಗುಡುಗು ಸಹಿತ ಮಳೆಯಾಗುವ ಹಿನ್ನೆಲೆಯಲ್ಲಕ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆ ಸೂಚನೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB