ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ಕರವೇ ನಡೆ, ಬೆಳಗಾವಿ ಕಡೆಗೆ ಎಂಬ ವಾಕ್ಯದೊಂದಿಗೆ ಹೋರಾಟ ಆರಂಭಿಸಿದೆ.
ಇಂದು ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ ಹಾಗೂ ಧರಣಿ ನಡೆಸಲು ಸಿದ್ಧತೆ ನಡೆಸಿರುವ ನಡುವೆಯೇ, ಬೆಳಗಾವಿ ನಗರ, ತಾಲೂಕಿನಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಹೀಗಾಗಿ ಯಾವುದೇ ಪ್ರತಿಭಟನೆ, ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಡಿಸಿಪಿ ವಿಕ್ರಮ್ ಆಮಟೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ಪ್ರತಿಭಟನಾಕಾರರನ್ನು ಹೀರೇಬಾಗೇವಾಡಿ ಟೋಲ್ ಗೇಟ್ ಬಳಿಯಲ್ಲಿಯೇ ತಡೆಯಲಾಗುವುದು. ಪ್ರತಿಭಟನಾ ನಿರತರನ್ನು ಮನವೊಲಿಸಿ ವಾಪಸ್ ಕಳುಹಿಸುವುದಾಗಿ ಡಿಸಿಪಿ ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700