nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಕುಂದಾನಗರಿಯಲ್ಲಿ ಅಧಿವೇಶನದ ರಂಗು
    ರಾಜ್ಯ ಸುದ್ದಿ December 12, 2021

    ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಕುಂದಾನಗರಿಯಲ್ಲಿ ಅಧಿವೇಶನದ ರಂಗು

    By adminDecember 12, 2021No Comments2 Mins Read
    belagavi adhiveshana

    ಬೆಳಗಾವಿ: ಕಳೆದ ಎರಡು ವರ್ಷಗಳ‌ ನಂತರ ನಡೆಯುತ್ತಿರುವ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಬರದ ಸಿದ್ದತೆ ನಡೆದಿದ್ದು, ನಗರ ಸ್ವಚ್ಚತೆಗೆ ಮಹಾನಗರ ಪಾಲಿಕೆ ತೊಡಗಿಸಿಕೊಂಡಿದೆ. ಜೊತೆಗೆ ಪೊಲೀಸ್ ಇಲಾಖೆ ಕೂಡಾ ಸಕಲ ಸಿದ್ದತೆ ಮಾಡಿಕೊಂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ.

    ನಗರದ ಸುವರ್ಣಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಈಗಾಗಲೇ ಬೆಂಗಳೂರಿನ ಸಚಿವಾಲಯಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಬೆಳಗಾವಿಗೆ ಸ್ಥಳಾಂತರವಾಗುತ್ತಿದ್ದು ಜಿಲ್ಲಾ ಮಟ್ಟದಲ್ಲಿಯೂ ಹಲವು ಏರ್ಪಾಡು ಮಾಡಿಕೊಳ್ಳಲಾಗುತ್ತಿದೆ. ಸಂಪೂರ್ಣ ಅಧಿವೇಶನಕ್ಕೆಂದು ರಾಜ್ಯದ ವಿವಿಧ ಭಾಗಗಳಿಂದ ಮೂರು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಎಲ್ಲಾ ಅಧಿಕಾರಿಗಳಿಗೆ ಉಳಿದುಕೊಳ್ಳಲು ಟೆಂಟ್ ಹಾಕಲಾಗಿದೆ. ಜೊತೆಗೆ ಪೊಲೀಸರಿಗೆ ಊಟ, ವಸತಿ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ.

    ಅಧಿವೇಶನ ಹಿನ್ನಲೆಯಲ್ಲಿ ಈಗಾಗಲೇ ನಗರದ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗುತ್ತಿದ್ದು ವಿವಿಧ ವೃತ್ತಗಳಿವೆ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ರಾಜ್ಯದ ನಾನಾ ಭಾಗಗಳಿಂದ ಜನರು ಬೆಳಗಾವಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ ನಗರವನ್ನು ಸ್ವಚ್ಚವಾಗಿಡಲು ಮಹಾನಗರ ಪಾಲಿಕೆ ಶ್ರಮಿಸುತ್ತಿದೆ.  ಅಷ್ಟೇ ಅಲ್ಲದೇ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು ಸೇರಿದಂತೆ ಅಧಿಕಾರಿಗಳಿಗೆ ಹಾಗೂ ಪತ್ರಕರ್ತರಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

    ಕೊವಿಡ್ ಮೂರನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಧಿವೇಶನದ ಮೇಲೆ ಕೊರೊನಾ ಕರಿನೆರಳು ಬೀರಿದ್ದು ಮುನ್ನೆಚ್ಚರಿಕೆಯಾಗಿ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಆರ್ಟಿಪಿಸಿಆರ್ ನಲ್ಲಿ ನೆಗೆಟಿವ್ ವರದಿ ಬಂದವರಿಗೆ ಮಾತ್ರ ಸುವರ್ಣಸೌಧಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ತಲಾ ಒಂದು ಕೊರೊನಾ ಕೇಸ್ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.

    ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಎಂಇಎಸ್ ಸಂಘಟನೆ ನಡೆಸುವ ಮಹಾಮೇಳಾವ್ ಗೆ ಜಿಲ್ಲಾಡಳಿತ ಈವರೆಗೆ ಅವಕಾಶ ಕಲ್ಪಿಸಿಲ್ಲ. ನಾಡ ವಿರೋಧಿ ಕೆಲಸಕ್ಕೆ ಎಂಇಎಸ್ ಮ,ಹಾ ಮೇಳಾವ್ ನಡೆಸುತ್ತದೆ, ಇದಕ್ಕೆ ಅವಕಾಶ ಕಲ್ಪಿಸಬಾರದೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಈ ಕುರಿತು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ವಿಕ್ರಂ ಆಮ್ಟೆ ಸ್ಪಷ್ಟನೆ ನೀಡಿದ್ದು. ಅನಧಿಕೃತವಾಗಿ ಎಂಇಎಸ್ ಮಹಾ ಮೇಳಾವ್ ನಡೆಸಿದರೆ ಕ್ರಮ ಕೈಗೊಳ್ಳುವ ಎಚ್ಚರಿಗೆ ನೀಡಿದೆ.

    ಈಗಾಗಲೇ ಅಧಿವೇಶನದ ಪೂರ್ವ ಸಿದ್ದತೆ ನಡೆದಿದ್ದು ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರು, ಸಚಿವರು ಹಾಗೂ ಅಧಿಕಾರಿಗಳಿಗೆ ಮೂರು ಡೋಸ್ ಲಸಿಕೆ ಆಗಿರಬೇಕು. ಜೊತೆಗೆ ಕೊರೊನಾ ಮಾರ್ಗಸೂಚಿ ಅನ್ವಯ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ ಲೈನ್ ಜಾಗೃತಿ ಕಾರ್ಯಕ್ರಮವು…

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.