ಬೆಳಗಾವಿ: ಭಾರತೀಯ ಜನತಾ ಪಕ್ಷಕ್ಕೆ ಬಹುಮತ ನೀಡಿದ ಬೆಳಗಾವಿ ಜನತೆಗೆ ಪರವಾಗಿ ಧನ್ಯವಾದಗಳು. ನಮ್ಮ ಮೇಲೆ ಬಹಳ ದೊಡ್ಡ ಜವಾಬ್ದಾರಿಯನ್ನು ಬೆಳಗಾವಿ ಜನತೆ ನೀಡಿದ್ದಾರೆ ಅದನ್ನು ನಾವು ಯಶಸ್ವಿಯಾಗಿ ನಿಭಾಯಿಸುತ್ತೇವೆ ಎಂದು ಶಾಸಕ ಅಭಯ ಪಾಟೀಲ್ ಹೇಳಿದರು.
ನೂತನವಾಗಿ ಆಯ್ಕೆಯಾದ ಮೇಯರ್ ಹಾಗೂ ಉಪಮೇಯರ್ ಅಭಿನಂದನೆ ಭಾಷಣದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಮೇಯರ್ ಹಾಗೂ ಉಪಮೇಯರ್ ಚುನಾವಣೆಯ ಬಹಿಷ್ಕರಿಸುವುದು ದುರ್ದೈವದ ಸಂಗತಿ. ಮೊದಲ ಬಾರಿಗೆ ಮೇಯರ್ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಜಾಪ್ರಭುತ್ವವನ್ನು ಗೌರವಿಸಿ ಅವರು ಇದರಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಅವರಿಗೆ ನಮ್ಮ ಜೊತೆ ಸಹಕಾರ ನೀಡುವುದಿಲ್ಲ ಎಂದು ಇದರಿಂದ ಸಂದೇಶ ನಮಗೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


