ಗಡಿವಿವಾದ ತಾರಕಕ್ಕೇರಿದ ಹಿನ್ನೆಲೆ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ-ಮಹಾರಾಷ್ಟ್ರ ನಡುವಿನ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇದೀಗ ಮತ್ತೆ ಆರಂಭವಾಗಿದೆ.
ಬೆಳಗಾವಿ-ಮಹಾರಾಷ್ಟ್ರ ನಡುವೆ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಿದೆ. ಬೆಳಗಾವಿಯಿಂದ 400ಕ್ಕೂ ಹೆಚ್ಚು ಬಸ್ ಸಂಚರಿಸುತ್ತಿದ್ದು, ಮಹಾರಾಷ್ಟ್ರದಿಂದಲೂ ಬೆಳಗಾವಿಗೆ ಬಸ್ ಆಗಮಿಸುತ್ತಿವೆ.
ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿವಿವಾದದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಹಾರಾಷ್ಟ್ರದ ಕೆಲ ಕಿಡಿಗೇಡಿ ಪುಂಡರು ಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಕಲ್ಲು ಮಸಿ ಬಳಿದು ಉದ್ಧಟತನ ತೋರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy