ಕೋಲಾರ: ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯಲ್ಲಿ ನಡೆದಿದೆ.
ಶಿವಾನಂದ ಜಕ್ಕಣ್ಣವರ್ (24) ಆತ್ಮಹತ್ಯೆಗೆ ಶರಣಾದವರು. ಸರ್ಕಾರಿ ಆಸ್ಪತ್ರೆಯ ವಸತಿ ಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಬೆಳಗಾವಿ ಮೂಲದವರಾಗಿರುವ ಶಿವಾನಂದ ಜಕ್ಕಣ್ಣವರ್ , 9 ತಿಂಗಳ ಹಿಂದಷ್ಟೇ ಬಾಳಗಾನಹಳ್ಳಿಯ ಸಮುದಾಯ ಆರೋಗ್ಯಾಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


