nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್‍ಐಸಿ ಆಸ್ಪತ್ರೆಗೆ ಅನುಮತಿ: ಸಂಸದ ಈರಣ್ಣ ಕಡಾಡಿ
    ರಾಜ್ಯ ಸುದ್ದಿ October 28, 2022

    ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್‍ಐಸಿ ಆಸ್ಪತ್ರೆಗೆ ಅನುಮತಿ: ಸಂಸದ ಈರಣ್ಣ ಕಡಾಡಿ

    By adminOctober 28, 2022No Comments2 Mins Read
    eranna

    ಬೆಳಗಾವಿ : ಬೆಳಗಾವಿಯ ಇಎಸ್‍ಐಸಿ ಆಸ್ಪತ್ರೆಯ ಕಟ್ಟಡದ ಶಿಥಿಲಾವ್ಯವಸ್ಥೆಯನ್ನು ಪರಿಗಣ ಸಿ, ಕಾರ್ಮಿಕರ ಹಿತದೃಷ್ಠಿಯಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್‍ಐಸಿ ಆಸ್ಪತ್ರೆ ನಿರ್ಮಿಸಲು ಅರ್ಹತೆ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ಪತ್ರದ ಮೂಲಕ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.

    ಕಳೆದ ತಿಂಗಳು ಆಗಸ್ಟ್ 4 ರಂದು ರಾಜ್ಯಸಭೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಹೊಸ ಆಸ್ಪತ್ರೆಯ ನಿರ್ಮಾಣದ ಕುರಿತು ಪ್ರಸ್ತಾಪಿಸಲಾಗಿತ್ತು. ಅದಕ್ಕೆ ಸಚಿವರು ಪತ್ರದ ಮೂಲಕ ಉತ್ತರ ನೀಡುವುದಾಗಿ ತಿಳಿಸಿದ್ದರು. ಆ ಹಿನ್ನಲೆಯಲ್ಲಿ 94,636 ಕಾರ್ಮಿಕರು ಕಾರ್ಮಿಕ ವಿಮಾ ನಿಗಮದಡಿ ನೊಂದಣ ಯಾಗಿದ್ದಾರೆ. ಇಎಸ್‍ಐಸಿ ಮಾನದಂಡಗಳ ಆಧಾರದ ಮೇಲೆ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್‍ಐಸಿ ಸ್ಥಾಪಿಸಲು ಅರ್ಹತೆ ಹೊಂದಿದೆ ಎಂದು ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಸಕಾರಾತ್ಮಕವಾಗಿ ಕೇಂದ್ರ ಸಚಿವರು ಉತ್ತರ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.


    Provided by
    Provided by

    ಕರ್ನಾಟಕದ ಬೆಂಗಳೂರಿನಲ್ಲಿ ಎರಡು, ಕಲಬುರಗಿಯಲ್ಲಿ ಒಂದು ಇಎಸ್‍ಐಸಿ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿವೆ. ಇತ್ತೀಚಿಗೆ ಉಡುಪಿ ಜಿಲ್ಲೆಯನ್ನು ಈ ಪಟ್ಟಿಗೆ ನೂತನವಾಗಿ ಸೇರ್ಪಡೆ ಮಾಡಲಾಗಿದೆ. ಆದರೆ ಬಹುಕಾಲದ ಬೇಡಿಕೆಯಾದ ಉತ್ತರ ಕರ್ನಾಟಕದ ಮುಖ್ಯ ಕೇಂದ್ರವಾಗಿರುವ ಬೆಳಗಾವಿಗೆ ಇಎಸ್‍ಐಸಿ ಆಸ್ಪತ್ರೆಯ ನಿರ್ಮಾಣಕ್ಕಾಗಿ ಬೇಡಿಕೆ ಇದ್ದರೂ ಅನುಷ್ಠಾನವಾಗಿಲ್ಲ. ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದದಲ್ಲಿ ಇಎಸ್‍ಐಸಿ ಆಸ್ಪತ್ರೆಗಳು ಬಹಳಷ್ಟು ಪ್ರಗತಿಯನ್ನು ಹೊಂದಿದ್ದು ರಾಜ್ಯ ಸರ್ಕಾರಗಳಿಂದ ನಡೆಸಲ್ಪಡುವ ಗುಜರಾತ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿನ ಇಎಸ್‍ಐಸಿ ಆಸ್ಪತ್ರೆಗಳನ್ನು ಕೇಂದ್ರ ಸರ್ಕಾರ ತೆಗೆದುಕೊಂಡು ಉತ್ತಮ ಆರೋಗ್ಯ ಸೇವೆಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.

    ಬೆಳಗಾವಿಯ ಇಎಸ್‍ಐಸಿ ಆಸ್ಪತ್ರೆಯನ್ನು ಎಲ್ಲ ವೈದ್ಯಕೀಯ ಸೌಲಭ್ಯಗಳೊಂದಿಗೆ 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಮತ್ತು ಅದರ ನಿರ್ವಹಣೆಯನ್ನು ಕೇಂದ್ರ ಸರಕಾರ ತೆಗೆದುಕೊಂಡು ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ನಿರ್ಧಾರವನ್ನು ಇದೇ ಅಕ್ಟೋಬರ 29 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಘೋಷಣೆ ಮಾಡಿ ಕಿತ್ತೂರು ಕರ್ನಾಟಕದ ಜನತೆಗೆ ಸಿಹಿಸುದ್ದಿ ನೀಡಬೇಕಾಗಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರನ್ನು ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ ಮತ್ತು ಇದಕ್ಕೆ ಪೂರಕವಾಗಿ ಉತ್ತರ ನೀಡಿದ ಕೇಂದ್ರ ಸಚಿವರನ್ನು ಕಿತ್ತೂರು ಕರ್ನಾಟಕ ಜನತೆ ಪರವಾಗಿ ಸಂಸದ ಈರಣ್ಣ ಕಡಾಡಿ ಅವರು ಅಭಿನಂದಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    ಕೆಲ ದಿನಗಳಿಂದ ಗಂಭೀರ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಸೋಮವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಕಾಯಿಲೆಯಾದ…

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.