ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಣಮಳೆಯಾಗುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗ, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂತಾಗಿದೆ. ಭಾರಿ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ 17 ಸೇತುವೆಗಳು ಮುಳುಗಡೆಯಾಗಿವೆ.
ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಿಡಕಲ್ ಜಲಾಶಯ ತುಂಬಿ ಹರಿಯುತ್ತಿದೆ. ಪರಿಣಾಮ ಜಲಾಶಯದಿಂದ 27,000 ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಬಿಡಲಾಗಿದ್ದು, ಗೋಕಾಕ್, ನಿಪ್ಪಾಣಿ ಸೇರಿದಂತೆ ಬೆಳಗಾವಿಯ ಹಲವೆಡೆಗಳಲ್ಲಿ ಪ್ರವಾಹವುಂಟಾಗಿದೆ.
ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ಉಕ್ಕಿ ಹರಿದ ಪರಿಣಾಮ ಮಾರ್ಕೆಟ್ ಗಳು ಮುಳುಗಡೆಯಾಗಿದ್ದು, ಉಪ್ಪಾರ ಓಣಿ, ಹಳೆ ದನದ ಪೇಟೆ ಹಾಗೂ ತಾಲೂಕಿನಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy