ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಬೆಳಗಾವಿ ರವರ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ಅಧಿವೇಶನದ ನಿಮಿತ್ತವಾಗಿ 22.12.2022 ರಿಂದ 30.12.2022ರವರೆಗೆ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ಈ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಾಗೂ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಣೆ ಸಮಾರಂಭವನ್ನು ದಿನಾಂಕಃ22.12.2022 ಸಾಯಂಕಾಲ 6.00 ಗಂಟೆಗೆ ಸರ್ದಾರ್ ಮೈದಾನದಲ್ಲಿನ ಭವ್ಯ ಸಭಾಂಗಣದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿರವರು ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾಗಿರುವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ರವರು ಉಪಸ್ಥಿತರಿರುತ್ತಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy