ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಹಾರಾಷ್ಟ್ರ ಮೂಲದ ರಾಮದಾಸ್ ಗೋಡೆ (42) ಸದ್ಯ ಬದುಕುಳಿದ ಚಾಲಕ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲಿಂದ ನದಿಗೆ ಕ್ಯಾಂಟರ್ ವಾಹನ ಉರುಳಿದ್ದು ಚಿಕ್ಕಮಗಳೂರಿನಿಂದ ಮಹಾರಾಷ್ಟ್ರಕ್ಕೆ ಕಟ್ಟಿಗೆ ಹೊತ್ತೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


