ಐಟಿಬಿಪಿ ಯೋಧರಿಗೆ ಸೇರಿದ ಎರಡು ಎಕೆ-47 ರೈಫಲ್ಗಳು ಕಳ್ಳತನವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ತರಬೇತಿಗೆಂದು ಮಧುರೈನಿಂದ ಬಂದಿರುವ ಐಟಿಬಿಪಿ 45ನೇ ಬೆಟಾಲಿಯನ್ನ ಯೋಧರಾದ ರಾಜೇಶ್ಕುಮಾರ್, ಸಂದೀಪ ಮೀನಾ ಅವರಿಗೆ ಸೇರಿದ ಎಕೆ-47 ರೈಫಲ್ಗಳು ಕಳುವಾಗಿವೆ.
ಆಗಸ್ಟ್ 17ರಂದು ರಾತ್ರಿ ಮಲಗುವಾಗ ಎಕೆ-47 ರೈಫಲ್ಗಳನ್ನು ಭದ್ರತೆಯಲ್ಲಿಯೇ ಇರಿಸಲಾಗಿತ್ತು. ಬಿಗಿ ಭದ್ರತೆಯ ನಡುವೆಯೂ ಘಾತಕ ರೈಫಲ್ಗಳು ಯೋಧರ ಸುಪರ್ದಿಯಿಂದ ತಪ್ಪಿಹೋಗಿರುವುದು ಆತಂಕಕ್ಕೆ ಕಾರಣವಾಗಿದೆ.
ರೈಫಲ್ ಪತ್ತೆಗಾಗಿ ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಐಟಿಬಿಪಿ ಅಧಿಕಾರಿಗಳು ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy