ಬೆಳಗಾವಿ : ಇಬ್ಬರನ್ನು ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಬಂದ ದುಷ್ಕರ್ಮಿಗಳು ಇಬ್ಬರು ವ್ಯಕ್ತಿಗಳ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬಸವರಾಜ ಬೆಳಗಾಂವಾಕ್ಕರ್ (23), ಗಿರೀಶ್ ನಾಗಣ್ಣನವರ್ (34) ಮೃತರು ಎಂದು ಗುರುತಿಸಲಾಗಿದೆ.
ಪಂದ್ಯಾವಳಿ ವೇಳೆ ಮೈದಾನಕ್ಕೆ ಅಪರಿಚಿತ ವಾಹನ ನುಗ್ಗಿದ್ದು, ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ವಾಹನದಿಂದ ಕೆಳಗಿಳಿದ ಅಪರಿಚಿತರು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy