ಹಿರಿಯೂರು: ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹಿರಿಯೂರು ನಗರ ಹಬ್ಬಕ್ಕೆ ಸಿದ್ಧವಾಗುತ್ತಿದ್ದು, ಖರೀದಿ ಭರಾಟೆಯೂ ಜೋರಾಗಿದೆ. ಇದರ ಜೊತೆಗೆ ಜನರ ಜೇಬಿಗೆ ಸಹ ಕತ್ತರಿ ಬೀಳುವಂತಿದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಖರೀದಿ ಜನರಿಗೆ ಕಗ್ಗಂಟಾಗಿದೆ.
ವರಮಹಾಲಕ್ಷ್ಮೀ ಹಬ್ಬದಲ್ಲಿ ಲಕ್ಷ್ಮೀ ದೇವಿ ಪೂಜಿಸಿದರೆ ವರ ದೇವಿ ಕರುಣಿಸುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ಹಬ್ಬ, ವ್ರತ ಆಚರಿಸಲು ಜನ ಸಡಗರದಿಂದ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹಬ್ಬದಲ್ಲಿ ಲಕ್ಷ್ಮೀಯ ಅನುಗ್ರಹಕ್ಕೆ ಜನರು ಸಂಭ್ರಮದಿಂದ ತಯಾರಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆಯುತ್ತದೆ.
ರಸ್ತೆಗಳಲ್ಲಿ ವಾಹನ ದಟ್ಟಣೆ
ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಹಿರಿಯೂರು ನಗರದ ಗಾಂಧಿ ಸರ್ಕಲ್ ಬಳಿ ಇರುವಂತಹ ನೆಹರು ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆದಿದೆ.
ಮಾರುಕಟ್ಟೆಯಲ್ಲಿ ಜನಜಾತ್ರೆಯಂತೆ ಕಂಡು ಬಂತು. ಹಬ್ಬಕ್ಕಾಗಿ ವಸ್ತುಗಳನ್ನು ಕೊಳ್ಳಲು ಜನ ತರಾತುರಿಯಲ್ಲಿ ಹಳ್ಳಿಗಳಿಂದ ಹಿರಿಯೂರು ನಗರಕ್ಕೆ ಬೆಳ್ಳಂ ಬೆಳ್ಳಗೆ ಬರತೊಡಗಿದ್ದರು.
ಇದೇ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಸ್ಥರು ನಮ್ಮ ತುಮಕೂರು ಮಾಧ್ಯಮದ ಪ್ರತಿನಿಧಿಯೊಂದಿಗೆ ಹಣ್ಣು , ಹೂ ಬೆಲೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು ಹಾಗೂ ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಭಾಶಯ ಕೋರಿದರು .

ಹಿರಿಯೂರು ನಗರದ ನಗರಸಭೆ ಅಧ್ಯಕ್ಷರಾದ ಎಸ್. ಶಿವರಂಜನಿ ಯಾದವ್ ಅವರ ಮನೆಯಲ್ಲಿ ಹಾಗೂ ಕಾಡುಗೊಲ್ಲರ ಮುಖಂಡರಾದ ಜ್ಯೋತಿಲಕ್ಷ್ಮಿ ಗೋಪಿಯಾದವ್ ಅವರ ಮನೆಯಲ್ಲೂ ಸಹ ವರಮಹಾಲಕ್ಷ್ಮಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಿದರು.
ಇದೇ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಗ್ರಾಮಾಂತರ ಪೋಲಿಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಅವರು ಕಾಡುಗೊಲ್ಲ ಮುಖಂಡರಾದ ಗೋಪಿಯಾದವ್ ಅವರ ಮನೆಗೆ ಪೂಜೆಗೆ ಭೇಟಿ ನೀಡಿದ ರಾಘವೇಂದ್ರ ಅವರು ಸಮಸ್ತ ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ತಿಳಿಸಿದರು.

ಹಿರಿಯೂರು ತಾಲ್ಲೂಕಿನಲ್ಲಿ ಕಳೆದ ಹದಿನೈದು ದಿನಗಳಿಂದ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದಾಗಿ ಕಂಗಲಾಗಿದ್ದ ಹಿರಿಯೂರು ತಾಲ್ಲೂಕಿನ ಜನತೆ ಇದೀಗ ವರಮಹಾಲಕ್ಷ್ಮಿ ಹಬ್ಬ ಪೂಜೆಯ ಸಂಭ್ರಮದ ಓಡಾಟದಲ್ಲಿ ತೊಡಗಿರುವುದು ಕಂಡು ಬಂತು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


