ಬೆಳಗಾವಿ : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು.ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ ರೈತರಿಗೆ ಪರಿಹಾರ ಒದಗಿಸಿದೆ.
ಜಿಲ್ಲೆಯಲ್ಲಿ ಹೆಸರು, ಮೆಕ್ಕೆಜೋಳ, ಹತ್ತಿ, ಸೂರ್ಯಕಾಂತಿ, ಸೋಯಾಬಿನ್ ಮತ್ತಿತರ ಬೆಳೆಹಾನಿಯಾಗಿತ್ತು.ಜಂಟಿ ಸಮೀಕ್ಷೆ ಆಧರಿಸಿ ಸರಕಾರದ ಮಾರ್ಗಸೂಚಿ ಪ್ರಕಾರ ಆಯಾ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಲಾಗಿದ್ದು, ನಾಳೆಯೇ ರೈತರ ಖಾತೆಗೆ ಹಣ ಜಮೆಯಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲೆಯ ಒಟ್ಟು 11,234 ರೈತರ ಖಾತೆಗೆ ಒಟ್ಟಾರೆ 17,01,01,195 ರೂಪಾಯಿ ಜಮೆಯಾಗಲಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


