ತಿಪಟೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕಲ್ಪತರು ನಾಡು ತಿಪಟೂರಿನಲ್ಲಿ ಹಬ್ಬದ ಖರೀದಿ ಜೋರಾಗಿದೆ. ನಗರದ ಮಾರುಕಟ್ಟೆಗಳಲ್ಲಿ ಹಬ್ಬದ ಸಾಮಗ್ರಿಗಳನ್ನು ಕೊಳ್ಳಲು ಜನ ಮುಗಿಬಿದ್ದಿದ್ದಾರೆ.
ನಗರದ ಕೃಷಿ ಉನ್ನತ ಮಾರುಕಟ್ಟೆ , ಸೂಪರ್ ಮಾರ್ಕೆಟ್ ಸೇರಿದಂತೆ ಹಲವು ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ಬರದಿಂದ ಸಾಗಿದೆ. ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಯುಗಾದಿ ಹಬ್ಬ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಲಾಗಿತ್ತು. ಈ ವರ್ಷ ಕೊರೊನಾ ಆರ್ಭಟ ತಣ್ಣಗಾದ ಹಿನ್ನೆಲೆ ಜಿಲ್ಲೆಯಾದ್ಯಂತ ಹಬ್ಬದ ಸಡಗರ ಸಂಭ್ರಮ ಕಳೆಗಟ್ಟಿದೆ.
ಇನ್ನು ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಿದ್ದು, ಇದರ ನಡುವೆಯೂ ಹಬ್ಬ ಆಚರಿಸುವ ಜೋಶ್ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಹೂವು ಹಣ್ಣು ತರಕಾರಿ ಬೆಲೆಯಲ್ಲಿ ಏರಿಕೆಯಾಗಿದೆ. ಆದರೂ ತಿಪಟೂರು ಜನರು ಯುಗಾದಿ ಹಬ್ಬ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ..
ವರದಿ: ಮಂಜು ಗುರುಗದಹಳ್ಳಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5