ಕೆ.ಆರ್. ಪುರ: ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕೆ.ಆರ್.ಪುರದ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು, ಪ್ರತಿನಿತ್ಯ ಮೂಲಭೂತ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಜನ ಜೀವನ ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾ ನಡುವೆ ಬೆಲೆ ಏರಿಕೆ ಬಡವರ ಮೇಲೆ ಬರೆ ಎಳೆದಂತಾಗಿದ್ದು, ಜೀವನ ಸಾಗಿಸುವುದು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ, ಜನವಿರೋಧಿ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ನುಡಿದರು.ದಿನಬಳಕೆಯ ಸಾಮಾಗ್ರಿಗಳ ಬೆಲೆ ಗಗಕ್ಕೆರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆ ವಿರುದ್ಧ ಜನಸಾಮಾನ್ಯರು ನಲುಗಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿ ಡಿ.ಕೆ.ಮೋಹನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್,ಅರಳಪ್ಪ, ಮಹಿಳಾ ಅಧ್ಯಕ್ಷೆ ಸಾಕಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಗೌಡ, ವಾರ್ಡನ ಅಧ್ಯಕ್ಷ ಜಾನ್ ಬಾಸ್ಕೋ ಮತ್ತಿತರರು ಇದ್ದರು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5