ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದರು. ನಗರದಲ್ಲಿಂದು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪದೇ ಪದೇ ಪಟ್ರೋಲ್, ಡಿಸೇಲ್,ಗ್ಯಾಸ್ ಸಿಲಿಂಡರ್, ಪಿಎನ್ ಜಿ, ಸಿಎನ್ ಜಿ ಬೆಲೆಗಳನ್ನು ಏರಿಸುತ್ತಿದೆ. ಮೋದಿ ಸರ್ಕಾರ ಜನವಿರೋಧಿ ಎಂಬುದಕ್ಕೆ ಇದು ಸಾಕ್ಷಿ ಎಂದು ದೂರಿದರು.ಅಧಿಕಾರ ವೈಫಲ್ಯವನ್ನು ಮರೆಮಾಚಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ.
ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್ ನಾಯಕರು ಸಮರ ಸಾರಿದರು. ಕಾಂಗ್ರೆಸ್ ಮಖಂಡರಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಎಂ. ಉದಯ್‌ಶಂಕರ್, ಮತ್ತಿತರರು ಭಾಗವಹಿಸಿದ್ದರು.
ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.ಅಲ್ಲದೆ, ಪೆಟ್ರೋಲ್ ಹಾಗೂ ಡೀಸೆಲ್ ದರ ಗಗನಕ್ಕೆ ಏರಿಕೆಯಾಗಿದ್ದು ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ.
ಕೂಡಲೇ ತೈಲ ದರವನ್ನು ಇಳಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಗೆ ಹೂ ಹಾರ ಹಾಕುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕಟ್ಟಿಗೆ, ತರಕಾರಿಗಳನ್ನು ಸಾಂಕೇತಿಕವಾಗಿ ಇಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಖಂಡ್ರೆ, ಉದಯ್ ಶಂಕರ್ ಸೇರಿದಂತೆ, ಕಾಂಗ್ರೆಸ್ ಶಾಸಕರು, ಎಐಸಿಸಿ ಪದಾಧಿಕಾರಿಗಳು, ಹಿರಿಯ ಮುಖಂಡರುಗಳು ಭಾಗಿಯಾಗಿದ್ದರು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5