nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳೆಹಾನಿ ಪರಿಹಾರ ವಿತರಣೆ ಭಾರೀ ತಾರತಮ್ಯ: ರೈತ ಮುಖಂಡರಿಂದ ಆಕ್ರೋಶ
    ಜಿಲ್ಲಾ ಸುದ್ದಿ October 8, 2022

    ಬೆಳೆಹಾನಿ ಪರಿಹಾರ ವಿತರಣೆ ಭಾರೀ ತಾರತಮ್ಯ: ರೈತ ಮುಖಂಡರಿಂದ ಆಕ್ರೋಶ

    By adminOctober 8, 2022No Comments2 Mins Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಕಳೆದ ತಿಂಗಳ ಹಿಂದೆ ಸುರಿದ ಮಳೆಯಿಂದ ಬೆಳೆ ಹಾನಿಯಾಗಿದ್ದು, ೀ ಹಿನ್ನೆಲೆಯಲ್ಲಿ ಸರ್ಕಾರದಿಂದ ವಿತರಿಸುತ್ತಿರುವ ಬೆಳೆಹಾನಿ ಪರಿಹಾರ ವಿತರಣೆಯಲ್ಲಿ ಭಾರೀ ತಾರತಮ್ಯ ಮಾಡಲಾಗುತ್ತಿದೆ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಹಾಗೂ ತಾಲ್ಲೂಕು ರೈತಸಂಘದ ಅಧ್ಯಕ್ಷ ಬ್ಯಾಡರಹಳ್ಳಿ ಶಿವಕುಮಾರ್ ಆರೋಪಿಸಿದ್ದಾರೆ.

    ಜಿಲ್ಲೆಯ ಹಿರಿಯೂರು ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳೆ ಪರಿಹಾರ ವಿತರಿಸುವಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು  ವಿಫಲವಾಗಿವೆ  ಎಂದು ಆರೋಪಿಸಿದರು.


    Provided by
    Provided by

    ತಾಲ್ಲೂಕಿನ ದೇವರಕೊಟ್ಟ ಗ್ರಾಮದ ತಿಪ್ಪೇಸ್ವಾಮಿ ಎಂಬುವವರಿಗೆ ಸೇರಿದ 5 ಎಕರೆ ಶೇಂಗಾ ಬೆಳೆ ಹಾನಿಗೊಳಗಾಗಿದ್ದು, ಎಕರೆಗೆ 2 ಸಾವಿರದಂತೆ 10 ಸಾವಿರ ಪರಿಹಾರ ಬಂದಿದೆ. ಅದೇ ಮಸ್ಕಲ್ ಗ್ರಾಮದ ನಾಗರಾಜ ಎಂಬುವವರಿಗೆ ಸೇರಿದ 5 ಎಕರೆ ಬೆಳೆಹಾನಿಗೆ ಕೇವಲ 2 ಸಾವಿರ ರೂಗಳ ಪರಿಹಾರ ಅವರ ಬ್ಯಾಂಕ್  ಖಾತೆಗೆ ಜಮಾ ಮಾಡಲಾಗಿದೆ ಎಂದರು.

    ಮಸ್ಕಲ್ ಗ್ರಾಮದ ಓಬಣ್ಣ ಮತ್ತು ತೇರುಮಲ್ಲಪ್ಪ ಎಂಬುವವರ 1 ಎಕರೆ ಶೇಂಗಾ ಬೆಳೆಹಾನಿಗೆ 5 ಸಾವಿರ ಹಣ ಬಂದಿದೆ, ನಾರಾಯಣ ಸ್ವಾಮಿ ಎಂಬುವವರಿಗೆ 1 ಎಕರೆ ಬೆಳೆಹಾನಿಗೆ 2 ಸಾವಿರ ಹಣ ಬಂದಿದೆ.  ಅಲ್ಲದೆ ಅದೇ ಗ್ರಾಮದ ಹನುಮಕ್ಕ ಬಿನ್ ಪಾತಲಿಂಗಪ್ಪ 2 ಎಕರೆ ಬೆಳೆಹಾನಿಯಾಗಿದ್ದು ಹಾಗೂ ಭೀಮಣ್ಣ ಎಂಬುವವರ 11 ಎಕರೆ ಶೇಂಗಾ ಬೆಳೆನಾಶವಾಗಿದ್ದು, ಯಾವುದೇ ಪರಿಹಾರ ಬಂದಿಲ್ಲ ಎಂದರು.

    ತಾಲ್ಲೂಕಿನ ಕಂದಾಯ ಇಲಾಖೆಯವರು ಯಾವ ಆಧಾರದ ಮೇಲೆ ಬೆಳೆಹಾನಿಗೊಳಗಾದ ರೈತರಿಗೆ ಈ ಬೆಳೆಪರಿಹಾರ ವಿತರಿಸಿದ್ದಾರೆ? ಕೃಷಿ ಹಾಗೂ ತೋಟಗಾರಿಕೆ ಇಲಾಖೆಯವರು ಬೆಳೆಹಾನಿ ಸರ್ವೇ ಮಾಡಲು ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದೇ  ನಮಗೆ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಈ ಬೆಳೆಪರಿಹಾರ ದಾಖಲಾತಿಯಲ್ಲಿ ಸಹ ಭಾರೀ ಅನ್ಯಾಯ-ಅಕ್ರಮಗಳು ನಡೆದಿದ್ದು, ಕೈತುಂಬ ಹಣ ಕೊಟ್ಟವರಿಗೆ ಕೆಲವು ಗ್ರಾಮಲೆಕ್ಕಾಧಿಕಾರಿಗಳು  ಬೆಳೆಹಾನಿ ದಾಖಲಿಸಿದ್ದು, ಆದರೆ ಅವರು ಕೇಳಿದಷ್ಟು ಹಣ ನೀಡದ ರೈತರಿಗೆ ಸರಿಯಾಗಿ ಬೆಳೆಪರಿಹಾರ ದಾಖಲಿಸದೇ, ಅನ್ಯಾಯವೆಸಗಲಾಗಿದೆ. ಈ ಬಗ್ಗೆ ರೈತರು ಪೋನ್ ಮಾಡಿದರೆ ಗ್ರಾಮಲೆಕ್ಕಾಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ ಎಂದರು.

    ಈ ವಿಷಯಕ್ಕೆ ಸಂಬಂಧ ಪಟ್ಟಂತೆ ಈ ಕೂಡಲೇ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಪ್ರಶಾಂತ ಕೆ. ಪಾಟೀಲ ಅವರು  ಹಾಗೂ ಕ್ಷೇತ್ರದ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ರವರು ಈ ಕಡೆ ಗಮನ ಹರಿಸಿ, ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ರೈತರಿಗೆ ಸೂಕ್ತಪರಿಹಾರ ನೀಡಿ, ಅನ್ಯಾಯವನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಈ ಅನ್ಯಾಯದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂಬುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.