ಸರಗೂರು: ಪ್ರತಿ ವರ್ಷದಂತೆ ಈ ಬಾರಿಯೂ ತಾಲ್ಲೂಕಿನ ಮೊದಲ ಜಾತ್ರಾ ಮಹೋತ್ಸವಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಯಡಿಯಾಲ ಉಪ ವಿಭಾಗದೊಳಗಿನ ಬೇಲದಕುಪ್ಪೆ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯಿತು.
ಪ್ರತಿವರ್ಷ ಕಾರ್ತಿಕ ಮಾಸದಂದು ಮೂರುದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವ ಸೋಮವಾರದಿಂದ ಆರಂಭವಾಗಿದ್ದು, ಈ ಜಾತ್ರಾ ಮಹೋತ್ಸವಕ್ಕೆ ಸರಗೂರು ಮತ್ತು ಹೆಚ್.ಡಿ.ಕೋಟೆ ತಾಲ್ಲೂಕು ಸೇರಿದಂತೆ ಜಿಲ್ಲಾ ವ್ಯಾಪ್ತಿಯಿಂದಲೂ ಸಹ ಸಾಕಷ್ಟು ಭಕ್ತರು ಪ್ರತಿವರ್ಷ ಆಗಮಿಸುತ್ತಿದ್ದರು. ಆದರೆ ಈ ವರ್ಷ ಕೋವಿಡ್ ಹಿನ್ನೆಲೆ ಸರ್ಕಾರ ನಿಯಮದ ಪ್ರಕಾರ ಸರಳ ಜಾತ್ರೆಗೆ ಅವಕಾಶವನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಏರಲಾಗಿತ್ತು. ಉಳಿದಂತೆ ಸಾಂಪ್ರದಾಯಿಕ ವಿಧಿ ವಿಧಾನ ನಡೆಸಲು ದೇವಸ್ಥಾನ ಕಮಿಟಿ ಮತ್ತು ಅರ್ಚಕರಿಗೆ ಅವಕಾಶ ನೀಡಲಾಗಿತ್ತು.
ಜಾತ್ರಾ ಮಹೋತ್ಸವದ ಬೆಳಗ್ಗೆ ಸುಮಾರು 10:30ಕ್ಕೆ ದೇವರ ಕಳಶ, ದೇವರ ವಿಗ್ರಹಮೂರ್ತಿಗಳನ್ನು ವಾದ್ಯ, ಜಾನಪದ ಕಲಾ ಪ್ರದರ್ಶನಗಳ ಮೂಲಕ ಮೆರವಣಿಗೆ ನಡೆಸಲಾಯಿತು.
ಕೊವಿಡ್ ಹಿನ್ನೆಲೆಯಲ್ಲಿ ಅರಣ್ಯದೊಳಗೆ ಖಾಸಗಿ ವಾಹನಗಳು, ಪೂಜಾ ಸಾಮಾಗ್ರಿಗಳು ಸೇರಿದಂತೆ ವಿವಿಧ ಅಂಗಡಿ ಮುಗ್ಗಟ್ಟುಗಳಿಗೂ ಸಹ ನಿರ್ಬಂಧವನ್ನು ಹೇರಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬೀಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಜಾತ್ರಾ ಮಹೋತ್ಸವಕ್ಕೆ ತಹಸೀಲ್ದಾರ್ ಚಲುವರಾಜು, ಸರಗೂರು ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಎನ್.ಆನಂದ್, ಪಿಎಸ್ ಐ ಶ್ರವಣ್ ದಾಸ್ ರೆಡ್ಡಿ, ಹಾಗೂ ತಾಲ್ಲೂಕು ಅಧಿಕಾರಿಗಳು ಭೇಟಿ ನೀಡಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700