nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    ಜಿಲ್ಲಾ ಸುದ್ದಿ February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಸ್ನೇಹಮಹಿ ವಾತಾವರಣ: ಡಿ.ಸಿ.ನಾಗೇಂದ್ರ ಪ್ರಸಾದ್ ಕೆ.
    By adminFebruary 20, 2026No Comments2 Mins Read
    ballari

    ಬಳ್ಳಾರಿ:   ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ 23,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಹಿತದೃಷ್ಟಿಯಿಂದ ಜಿಲ್ಲಾಡಳಿತ ವತಿಯಿಂದ ಸ್ನೇಹಮಹಿ ವಾತಾವರಣ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಹೇಳಿದರು.

    ಗುರುವಾರ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಂತೆ ಪರೀಕ್ಷೆಗಳ ವೇಳಾಪಟ್ಟಿ, ವಿದ್ಯಾರ್ಥಿಗಳ ಸಂಖ್ಯೆ, ಭದ್ರತಾ ವ್ಯವಸ್ಥೆಗಳು, ಉಚಿತ ಸಾರಿಗೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮಗಳ ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.


    Provided by
    Provided by

    ದ್ವಿತೀಯ ಪಿಯುಸಿ:

    ದ್ವಿತೀಯ ಪಿಯುಸಿ ಪರೀಕ್ಷೆ–1 ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 15,652 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 13,286 ಹೊಸ ಅಭ್ಯರ್ಥಿಗಳು(ಹುಡುಗ-5,580 ಮತ್ತು ಹುಡುಗಿಯರು-7,706), 1,899 ಮರು ಪರೀಕ್ಷಾರ್ಥಿಗಳು, 467 ಖಾಸಗಿ ಅಭ್ಯರ್ಥಿಗಳು ಒಳಗೊಂಡಿದ್ದಾರೆ. ಬಳ್ಳಾರಿ ನಗರ-12, ಸಿರುಗುಪ್ಪ-03, ಸಂಡೂರು-02, ಕಂಪ್ಲಿ-02 ಮತ್ತು ಕುರುಗೋಡು-01 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಹೇಳಿದರು.

    ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ:

    ಅದೇರೀತಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ–1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಜಿಲ್ಲೆಯಲ್ಲಿ ಒಟ್ಟು 326 ಹತ್ತನೆಯ ಶಾಲೆಗಳಿಂದ ಒಟ್ಟು 23,271 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 19,722 ಹೊಸ ಅಭ್ಯರ್ಥಿಗಳು, 2,009 ಮರು ಪರೀಕ್ಷಾರ್ಥಿಗಳು, 1,328 ಖಾಸಗಿ ಅಭ್ಯರ್ಥಿಗಳು, 212 ಖಾಸಗಿ ಮರು ಪರೀಕ್ಷಾರ್ಥಿಗಳು ಒಳಗೊಂಡಿದ್ದಾರೆ. ಒಟ್ಟು ಜಿಲ್ಲೆಯ 65 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿವೆ ಎಂದು ತಿಳಿಸಿದರು.

    ವಿದ್ಯಾರ್ಥಿಗಳಿಗೆ ಸ್ನೇಹಮಯಿ ವಾತಾವರಣ:

    ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಹಿತದೃಷ್ಟಿಯಿಂದ ಜಿಲ್ಲಾಡಳಿತ ವತಿಯಿಂದ ಸ್ನೇಹಮಹಿ ವಾತಾವರಣ ಕಲ್ಪಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಕೆಕೆಆರ್‌ಟಿಸಿ ಮತ್ತು ನಗರ ಸಾರಿಗೆ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂತಿರುಗಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

    ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ:

    ಪರೀಕ್ಷಾ ಅವಧಿಯಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಹೋಗಲು ಕೆಕೆಆರ್‌ ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಗಾಳಿ, ಬೆಳಕು, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರುವಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಸೂಚಿಸಲಾಗಿದೆ ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಅವರು ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಸೆಂಟರ್‌ ಗಳನ್ನು ಮುಚ್ಚಲು ಜಿಲ್ಲಾಧಿಕಾರಿಯವರ ಆದೇಶದ ಮೂಲಕ ಆದೇಶಿಸಲಾಗುತ್ತದೆ ಎಂದು ಹೇಳಿದರು.

    ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ತಪ್ಪು ಮಾಹಿತಿಯನ್ನು ತಡೆಯಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸುಳ್ಳು ಪ್ರಚಾರ ಮಾಡುವ ಖಾತೆಗಳನ್ನು ಗುರುತಿಸಿ ತಡೆದು ಕಾನೂನು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗಳು ಸುರಕ್ಷಿತವಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇಡಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಒಳಗಡೆ, ಹೊರಗಡೆ ಮತ್ತು ಪ್ರಾಚಾರ್ಯರ ಕೊಠಡಿಗಳಲ್ಲಿಯೂ ಸಹ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಳ್ಳಾರಿ:   ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ 23,271…

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.