nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026
    Facebook Twitter Instagram
    ಟ್ರೆಂಡಿಂಗ್
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣಾ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಜ್ಜು: ಡಿಸಿ ಮಿಶ್ರಾ
    ಜಿಲ್ಲಾ ಸುದ್ದಿ May 31, 2024

    ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣಾ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಜ್ಜು: ಡಿಸಿ ಮಿಶ್ರಾ

    By adminMay 31, 2024No Comments2 Mins Read
    ballary

    ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 08 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಜೂನ್ 04 ರಂದು ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

    ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.


    Provided by
    Provided by

    ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ.  ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 02 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 08 ಹಾಲ್‍ ಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

    ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಟೇಬಲ್‍ ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನಿಯೋಜಿಸಲಾಗಿದೆ.  ಬಳ್ಳಾರಿ ಜಿಲ್ಲೆಗೆ ಒಟ್ಟು 112 ಟೇಬಲ್‍ ಗಳಂತೆ, 150 ಎಣಿಕಾ ಮೇಲ್ವಿಚಾರಕರು, 159 ಎಣಿಕಾ ಸಹಾಯಕರು ಮತ್ತು 146 ಎಣಿಕಾ ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ.  ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದ್ದು, ಎರಡನೆ ಹಂತದ ತರಬೇತಿಯನ್ನೂ ನೀಡಲಾಗುವುದು.  121 ಜನರಿಗೆ ಈಗಾಗಲೆ ಕೌಂಟಿಂಗ್ ಏಜೆಂಟ್ ಆಗಿ ವೀಕ್ಷಣೆಗೆ ಪಾಸ್ ನೀಡಲಾಗಿದೆ ಎಂದರು.

    88 ಹಡಗಲಿ ಕ್ಷೇತ್ರದಲ್ಲಿ ಒಟ್ಟು 218 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 16 ಸುತ್ತು ಮತ ಎಣಿಕೆ ನಡೆಯಲಿದೆ. 89 ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, 19 ಸುತ್ತು ಮತ ಎಣಿಕೆ ನಡೆಯಲಿದೆ. 90 ವಿಜಯನಗರ ಕ್ಷೇತ್ರದಲ್ಲಿ ಒಟ್ಟು 259 ಮತಗಟ್ಟೆಗಳಿದ್ದು, ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ.

    91 ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 242 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 18 ಸುತ್ತು ಮತ ಎಣಿಕೆ ನಡೆಯಲಿದೆ. 93-ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 235 ಮತಗಟ್ಟೆಗಳಿದ್ದು, 17 ಸುತ್ತು. 94-ಬಳ್ಳಾರಿ ನಗರ ಕ್ಷೇತ್ರದಲ್ಲಿ 261 ಮತಗಟ್ಟೆಗಳಿದ್ದು, 19 ಸುತ್ತು. 95 ಸಂಡೂರು ಕ್ಷೇತ್ರದಲ್ಲಿ ಒಟ್ಟು  253 ಮತಗಟ್ಟೆಗಳಿದ್ದು, 19 ಸುತ್ತು ಹಾಗೂ 96-ಕೂಡ್ಲಿಗಿ ಕ್ಷೇತ್ರದಲ್ಲಿ 250 ಮತಗಟ್ಟೆಗಳಿದ್ದು, ಒಟ್ಟು 18 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.

    ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

    ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ ಎಂದು ಹೇಳಿದರು.

    ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜನೆ:

    ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕೇಂದ್ರವಾದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ 01-ಎಸ್‍ಪಿ, 02-ಎಎಸ್ಪಿ, 05-ಡಿವೈಎಸ್ಪಿ, 15-ಸಿಪಿಐ, 25-ಪಿಎಸ್‍ಐ, 40-ಎಎಸ್‍ಐ, 250-ಪಿಸಿ, 04-ಕೆಎಸ್‍ಆರ್‍ಪಿ, 04 ಡಿ.ಆರ್ ತಂಡ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್ ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ತುರುವೇಕೆರೆ: ದೇವರು ಬಂದಂತೆ ನಾಟಕವಾಡಿ ನೂತನ ದಲಿತ ದಂಪತಿಯನ್ನು ಅವಮಾನಿಸಿ ದೇವಾಲಯದಿಂದ ಹೊರಕಳಿಸಿದ ಘಟನೆಗೆ ಸಂಬಂಧಿಸಿದಂತೆ  ಕೃತ್ಯ ನಡೆಸಿದ ವ್ಯಕ್ತಿ…

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.