ಬಳ್ಳಾರಿ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.27 ರಂದು ಬೆಳಿಗ್ಗೆ 08:30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ ಆರ್) ಅಡಿ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಘನ ಉಪಸ್ಥಿತಿ ಇರುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು.
ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಜಹೀರಾ ನಾಸೀಮ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ ತ್ರಿಲೋಕಚಂದ್ರ, ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಹೆಚ್.ಎನ್ ಗೋಪಾಲಕೃಷ್ಣ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಕಲಬುರಗಿಯ ಕಲಬುರಗಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಎ.ಶಿಂಧಿಹಟ್ಟಿ, ಹುಬ್ಬಳ್ಳಿಯ ಹುಬ್ಬಳ್ಳಿ ವಲಯ ಕಾರ್ಖಾನೆಗಳ ಜಂಟಿ ನಿರ್ದೇಶಕ ರವೀಂದ್ರನಾಥ್ ಎನ್.ರಾಠೋಡ್, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ. ಆರ್., ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ., ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ವಿಶೇಷ ಚೇತನರು ಹಾಗೂ ಅವರ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


