nammatumakuru

    Subscribe to Updates

    Get the latest creative news from FooBar about art, design and business.

    What's Hot

    2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ

    July 3, 2026

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026
    Facebook Twitter Instagram
    ಟ್ರೆಂಡಿಂಗ್
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    ಜಿಲ್ಲಾ ಸುದ್ದಿ July 3, 2026

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    By adminJuly 3, 2026No Comments2 Mins Read

    ಬಳ್ಳಾರಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸಲು ನಗರದ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಗುರುವಾರ ಬೃಹತ್ ಜಾಗೃತಿ ಜಾಥಾವನ್ನು ಆಯೋಜಿಸಲಾಗಿತ್ತು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಾಯಿತು.

    ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು, “ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರತಿಯೊಬ್ಬ ನಾಗರಿಕರು ತಮ್ಮ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ಎಸ್‌ಐಆರ್ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು. ಇದರಿಂದ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಾಧ್ಯವಾಗುತ್ತದೆ. ಈ ಕುರಿತು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಹಾಗೂ ಪೋಷಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು” ಎಂದು ಕರೆ ನೀಡಿದರು.

    18 ವರ್ಷ ತುಂಬಿದ ಯುವಕ-ಯುವತಿಯರು ಫಾರ್ಮ್–6 ರ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಇದೇ ವೇಳೆ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿರುವ ತಪ್ಪುಗಳ ತಿದ್ದುಪಡಿಗಾಗಿ ಫಾರ್ಮ್-8 ಅನ್ನು ಬಳಸಬಹುದು ಹಾಗೂ ಮರಣ ಹೊಂದಿದವರ ಅಥವಾ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸಹಕರಿಸಬೇಕು ಎಂದು ಅವರು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, “ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ವೋಟರ್ ಹೆಲ್ಪ್ ಲೈನ್ ಆಪ್ (Voter Helpline App) ಅಥವಾ ವೋಟರ್ ಸರ್ವೀಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲೇ ಸುಲಭವಾಗಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಿಕೊಳ್ಳಬಹುದು” ಎಂದು ಮಾಹಿತಿ ನೀಡಿದರು. ಜುಲೈ 29ರ ವರೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.

    ಗಮನ ಸೆಳೆದ ಘೋಷಣಾ ಫಲಕಗಳು:

    ಜಾಥಾದಲ್ಲಿ ಪಾಲ್ಗೊಂಡಿದ್ದ ನೂರಾರು ವಿದ್ಯಾರ್ಥಿಗಳು ‘ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರತಿಯೊಬ್ಬ ಅರ್ಹ ನಾಗರಿಕ, ಒಂದು ಮತ, ಒಂದು ಗುರುತು’, ‘ದೋಷರಹಿತ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ’ ಎಂಬ ಘೋಷಣಾ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆದರು. ಈ ಜಾಥಾವು ಸರ್ಕಾರಿ ಪಿಯು ಕಾಲೇಜಿನಿಂದ ಆರಂಭವಾಗಿ ಇಂದಿರಾ ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಸಾಗಿ ಮರಳಿ ಕಾಲೇಜು ಆವರಣದಲ್ಲಿ ಮುಕ್ತಾಯಗೊಂಡಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂಶ್ ಶಿವಪುರೆ, ಜಿಪಂ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ, ಕಾಲೇಜಿನ ಪ್ರಾಚಾರ್ಯ ಸುಂಕಪ್ಪ, ಪ್ರಾಧ್ಯಾಪಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ

    July 1, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ

    July 3, 2026

    ತಿಪಟೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ…

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.