nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026
    Facebook Twitter Instagram
    ಟ್ರೆಂಡಿಂಗ್
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
    ಜಿಲ್ಲಾ ಸುದ್ದಿ March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    By adminMarch 17, 2026No Comments2 Mins Read
    lokadalath

    ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 32 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು.

    ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಖುದ್ದಾಗಿ ಪ್ರಕರಣಗಳ ವಿಲೇವಾರಿ ಮಾಡುವಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ನಡೆದ ಲೋಕ್–ಅದಾಲತ್‌ ಗಳನ್ನು ವೀಕ್ಷಿಸಿದರು.


    Provided by
    Provided by

    ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು–ಕಕ್ಷಿದಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳುವುದು ಉತ್ತಮ ಜೀವನ ನಡೆಸಲು ಒಂದು ಸದಾವಕಾಶವಾಗಿದೆ. ತ್ವರಿತ ನ್ಯಾಯಕ್ಕಾಗಿ ಕಕ್ಷಿದಾರರು ಮುತುವರ್ಜಿ ವಹಿಸಿಕೊಂಡು, “ರಾಷ್ಟ್ರೀಯ ಲೋಕ್ ಅದಾಲತ್”ನಲ್ಲಿ ಭಾಗವಹಿಸಿದರೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಂಡು ಸಾಮರಸ್ಯ ಜೀವನ ನಡೆಸಬಹುದು ಎಂದರು.

    ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನ್ಯಾಯಾಲಯದ ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಯ ಸಹಕಾರದೊಂದಿಗೆ ಮುಂದಿನ ದಿನಮಾನಗಳಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕಾರ್ಯಪ್ರವೃತ್ತರಾಗುತ್ತಾರೆ ಎಂದರು.

    ಲೋಕ್ ಅದಾಲತ್‌ ನ ಅಂಕಿಅಂಶ:

    ಇತ್ಯರ್ಥಗೊಂಡ ಬಾಕಿ ಪ್ರಕರಣಗಳ ಒಟ್ಟು ಸಂಖ್ಯೆ: 11,406 ಪ್ರಕರಣಗಳು.

    ವಸೂಲಾದ ಪರಿಹಾರ ಮೊತ್ತ: ರೂ.37,86,70,940.

    ಇತ್ಯರ್ಥಗೊಂಡ ವ್ಯಾಜ್ಯ ಪೂರ್ವ ಪ್ರಕರಣಗಳು: 6,47,139.

    ವಸೂಲಾದ ಪರಿಹಾರ ಮೊತ್ತ: ರೂ.127,58,84,012.

    ಇತ್ಯರ್ಥಗೊಳಿಸಿದ ಪ್ರಕರಣಗಳು:

    ನ್ಯಾಯಾಲಯದಲ್ಲಿ ದೀರ್ಘಕಾಲದಿಂದ ಬಾಕಿ ಇದ್ದ 17,590 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರುತಿಸಲಾಗಿತ್ತು. ಇವುಗಳಲ್ಲಿ 11,406 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ.

    ರಾಷ್ಟ್ರೀಯ ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಶನಿವಾರ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 27 ನ್ಯಾಯಪೀಠಗಳನ್ನು (ಬೆಂಚ್) ಸ್ಥಾಪಿಸಲಾಗಿತ್ತು.

    ವಿವಾದಗಳ ಪರಿಹಾರಕ್ಕೆ ಮತ್ತು ಸಮುದಾಯದಲ್ಲಿ ಪರಸ್ಪರ ವಿಶ್ವಾಸವನ್ನು ಹೆಚ್ಚಿಸಲು ಲೋಕ್ ಅದಾಲತ್‌ಗಳು ಪರಿಣಾಮಕಾರಿ ಸಾಧನಗಳಾಗಿವೆ.

    ಎಲ್ಲಾ ಪಾಲುದಾರರ ಸಹಕಾರ:

    ಈ ಅದಾಲತ್‌ನ ಯಶಸ್ಸಿಗೆ ನ್ಯಾಯಾಧೀಶರು, ವಕೀಲರು, ಪೊಲೀಸ್ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಗಳು ಸೇರಿದಂತೆ ಎಲ್ಲ ಪಾಲುದಾರರ ಸಹಕಾರ ಕಾರಣವಾಗಿದೆ ಎಂದು ತಿಳಿಸಿದರು.

    ಲೋಕ್ ಅದಾಲತ್‌ಗಳು ವಿವಾದಗಳನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಇತ್ಯರ್ಥಪಡಿಸುವಲ್ಲಿ ಎಷ್ಟು ಯಶಸ್ವಿಯಾಗಿವೆ ಎಂಬುದನ್ನು ತೋರಿಸುತ್ತವೆ. ಇದು ನ್ಯಾಯಾಂಗದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಸಮಾಜದಲ್ಲಿ ಸೌಹಾರ್ದಯುತ ವಾತಾವರಣವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಈ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಲು ಕಾರಣರಾದ ಎಲ್ಲರಿಗೂ ಅಭಿನಂದನೆ ತಿಳಿಸಿದರು.

    ಇದೇ ವೇಳೆ ವಿವಿಧ ಕಲಹಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡ ಕುಟುಂಬಗಳನ್ನು ಮಾತನಾಡಿಸಿ ಅಭಿನಂದಿಸಿರು.

    ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ರಾಜೇಶ್.ಎನ್ ಹೊಸಮನೆ ಸೇರಿದಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ಅಧಿಕಾರಿಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ತುಮಕೂರು: ಸಮರ್ಪಕವಾಗಿ ಸಾಲ ವಸೂಲಿಯಾಗದಿದ್ದರೆ ಯಾವುದೇ ಹಣಕಾಸು ಸಂಸ್ಥೆ ಆರೋಗ್ಯಕರವಾಗಿರುವುದಿಲ್ಲ. ಆರ್ಥಿಕ ಶಿಸ್ತು, ಶ್ರದ್ಧೆಯಿಂದ ಶ್ರಮಿಸಿದರೆ ಸಂಸ್ಥೆ ಬೆಳವಣಿಗೆಯಾಗುತ್ತದೆ. ಹರ್ತಿ…

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.