ತುಮಕೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರ ಬದುಕು, ಅಗತ್ಯ ವಸ್ತುಗಳ ಬೆಲೆ ಏರಿಕೆ ಗಳ ನಡುವೆ ಬೀದಿಗೆ ಬೀಳುವಂತಾಗಿದೆ ಎಂದು ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ಇಂಧನ ಬೆಲೆ, ಗ್ಯಾಸ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಜನಸಾಮಾನ್ಯರ ಬದುಕು ತೀರ ಕಷ್ಟದಲ್ಲಿದೆ ಆದರೂ ಸಹ ಇದನ್ನು ಅರಿಯದ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೇ ಸಂದರ್ಭದಲ್ಲಿ ದ್ವಿಚಕ್ರವಾಹನ ಹಾಗೂ ಗ್ಯಾಸ್ ಸಿಲೆಂಡರ್ ಗಳನ್ನು ಕುದುರೆಗಾಡಿಯಲ್ಲಿ ಹೊತ್ತು ತಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಜಮಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಅನಿಲ್, ರಾಜೇಶ್ ದೊಡ್ಮನೆ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy