ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿಗಳ ಬಳಿ ತಮ್ಮ ಗ್ರಾಮಗಳಿಗೆ ಆಗಬೇಕಾದ ರಸ್ತೆ, ನೀರು, ವಿದ್ಯುತ್, ಶಾಲೆಗಳು, ದೇವಾಲಯಗಳ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು ಜನರಲ್ಲಿ ಅರಿವು ಮೂಡಿಸಲು ತಿಳುವಳಿಕೆ ನೀಡಲು ನಾನು ಬಂದಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಮಾಜಿ ಅಧ್ಯಕ್ಷರಾದ ಮುರಳೀಧರ ಹಾಲಪ್ಪ ಹೇಳಿದರು.
ತುರುವೇಕೆರೆ ತಾಲೂಕಿನ ಚಾಕುವಳ್ಳಿ ಪಾಳ್ಯ ಗ್ರಾಮಕ್ಕೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತರಾಜು ಪರ ಪ್ರಚಾರ ಹಾಗೂ ಮತಯಾಚನೆ ಮಾಡಲು ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮಗಳಲ್ಲಿ ವಾಚನಾಲಯಗಳಾಗಬೇಕು, ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಪ್ರತಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಶೌಚಾಲಯ ದೊರೆಯುವಂತಾಗಬೇಕಾಗಿದೆ. ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಯೋಜನೆ ರೂಪಗೊಳ್ಳಬೇಕಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿಯಾದ ಬೆಮೆಲ್ ಕಾಂತರಾಜುರವರು ನಮ್ಮ ಜೊತೆಯಲ್ಲಿದ್ದರೆ, ಅನುಕೂಲ ಮಾಡಿಕೊಡುತ್ತೇನೆ ಎಂದು ವಾಗ್ದಾನ ನೀಡಿದ್ದಾರೆ. ಆದುದರಿಂದ ಅವರ ಕೈ ಬಲಪಡಿಸಲು ನಾನು ಬಂದಿದ್ದೇನೆ. ಹಾಗೆಯೇ ಅವರು ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸಬೇಕು, ಅವರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಬೇಕು. ಅವರು ನೀಡಿರುವ ವಾಗ್ದಾನ ತಿಳಿಸಲು ತಾನು ಬಂದಿರುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ತಿಮ್ಮಯ್ಯ, ಗೋವಿಂದರಾಜು, ಚನ್ನಬಸವಯ್ಯ, ದರ್ಶನ್, ಲಕ್ಷ್ಮೀಶ್, ಅಭಿಷೇಕ್ ದೇವರಾಜ್, ಹಾಲು ರಂಗಯ್ಯ, ದಾಸಣ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA