ಪ್ರೀಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೆಂಚು ಕಾಯಿಸಿದ್ದರಿಂದ ಪೋರ್ಚುಗಲ್ ತಂಡದ ಕೋಚ್ ವಿರುದ್ಧ ಅಸಮಾಧಾನ ಹೊರಹಾಕಿರುವ ವಿಶ್ವದ ಅಗ್ರಮಾನ್ಯ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಟೂರ್ನಿಯಿಂದ ಹೊರಹೋಗುವುದಾಗಿ ಬೆದರಿಕೆ ಹಾಕಿದ್ದಾರೆ.
ಸ್ವಿಜರ್ ಲೆಂಡ್ ವಿರುದ್ಧದ ಪಂದ್ಯದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಕಣಕ್ಕಿಳಿಸದೇ ಬೆಂಚಿನಲ್ಲಿ ಕೂರಿಸಿದ್ದರು. ಇದೀಗ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಅಲ್ಪ ಸಮಯ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಕೋಚ್ ನಡೆಯಿಂದ ಬೇಸರಗೊಂಡಿರುವ ಕ್ರಿಸ್ಟಿಯಾನೊ ರೊನಾಲ್ಡೊ ಆಡಲು ಅವಕಾಶ ನೀಡದೇ ಇದ್ದರೆ ವಿಶ್ವಕಪ್ ನಿಂದ ಹೊರನಡೆಯುವುದಾಗಿ 37 ವರ್ಷದ ಕ್ರಿಸ್ಟಿಯಾನೊ ರೊನಾಲ್ಡೊ ಎಚ್ಚರಿಕೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಆದರೆ ಪೋರ್ಚುಗಲ್ ಫುಟ್ಬಾಲ್ ಸಂಸ್ಥೆ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಬೆದರಿಕೆ ಹಾಕಿಲ್ಲ. ವಿಶ್ವಕಪ್ ನಲ್ಲಿ ತಂಡದ ಜೊತೆ ಅವರು ಇರಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy