ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ತಾಯಿ—ಮಗು ಸಾವನ್ನಪ್ಪಿದ ಘಟನೆ ಇನ್ನೂ ಹಸಿಯಾಗಿರುವಾಗಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಬೆಂಗಳೂರಿನ ದೊಡ್ಡನೆಕ್ಕುಂದಿ ಜಂಕ್ಷನ್ ನಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕಾರಿನ ಮೇಲೆ ಮೆಟ್ರೋ ಬ್ಯಾರಿಕೇಡ್ ಬಿದ್ದಿದ್ದು, ಕಾರಿನಲ್ಲಿದ್ದವರು ಸ್ವಅಲ್ಪದರಲ್ಲೇ ಪಾರಾಗಿದ್ದಾರೆ.
ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳೀಯ ನಿವಾಸಿಗಳು ಪ್ರಯಾಣಿಸುತ್ತಿದ್ದ ವೇಳೆ ಚಲಿಸುತ್ತಿದ್ದ ಕಾರಿನ ಮೇಲೆಯೇ ಬ್ಯಾರಿಕೇಡ್ ಉರುಳಿ ಬಿದ್ದಿದೆ.
ಬ್ಯಾರಿಕೇಡ್ ಬಿದ್ದ ಪರಿಣಾಮ ಕಾರು ಭಾಗಶಃ ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣವೇ ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದಾರೆ. ಕಾರಿನ ಮಾಲಿಕರು ನೀಡುವ ದೂರನ್ನು ಆಧರಿಸಿ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


