ಹಲವು ಬೇಡಿಕೆ ಈಡೇರಿಸುವಂತೆ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯಗೊಂಡಿದ್ದು, ಪ್ರತಿಭಟನೆಯ ಮುಂದುವರಿದ ಭಾಗವಾಗಿ ‘ಬೆಂಗಳೂರು ಬಂದ್’ಗೆ ನಿರ್ಧರಿಸಿವೆ.
ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಸೆಪ್ಟೆಂಬರ್ 11ರಂದು ಬೆಂಗಳೂರು ಬಂದ್ ಗೆ ನಿರ್ಧರಿಸಿವೆ. 32 ಒಕ್ಕೂಟದ ಪ್ರತಿನಿಧಿಗಳು ಸಭೆ ಸೇರಿ ಬಂದ್ ನ ದಿನಾಂಕವನ್ನು ನಿರ್ಧರಿಸಿದ್ದಾರೆ. ಅಂದು ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸಂಚಾರ ಸಂಪೂರ್ಣ ಬಂದ್ ಇರಲಿದೆ.


