ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸ್ ಹಾಗೂ ಹೋಂಡಾ ಇಂಡಿಯಾ ಫೌಂಡೇಶನ್ ರವರ ಸಹಯೋಗದಲ್ಲಿ 50 ಸಂಚಾರ ಗಸ್ತು ವಾಹನಗಳನ್ನು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.
ಬೆಂಗಳೂರು ನಗರ ಸಂಚಾರ ಪೊಲೀಸ್ ವತಿಯಿಂದ ಬಿಟಿಪಿ ಅಸ್ತ್ರಂ ಆ್ಯಪ್ ನಲ್ಲಿ ನೂತನವಾಗಿ ಸೇರ್ಪಡೆ ಮಾಡಿರುವ ‘ಇ–ಆ್ಯಕ್ಸಿಡೆಂಟ್’ ಹೊಸ ಆವಿಷ್ಕಾರವನ್ನು ಅವರು ಬಿಡುಗಡೆ ಮಾಡಿದರು.
ಅಪಘಾತದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು ಹಾಗೂ ವಿಮೆ ಪಡೆದುಕೊಳ್ಳಲು ಸರಳಗೊಳಿಸುವ ನಿಟ್ಟಿನಲ್ಲಿ ಪರಿಚಯಿಸಲಾಗಿದೆ. ಬಿಟಿಪಿ ಅಸ್ತ್ರಂ ಆ್ಯಪ್ ನಲ್ಲಿ ಇ–ಆ್ಯಕ್ಸಿಡೆಂಟ್ ಮೂಲಕ ರಿಪೋರ್ಟ್ ಮಾಡಿದರೆ ಸುಲಭವಾಗಿ ವಿಮೆ ಪಡೆದುಕೊಳ್ಳಲು ಸಹಾಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ, ಹೋಂಡಾ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಾದ ಸುನೀಲ್ ಕುಮಾರ್ ಮಿತ್ತಲ್, ಪ್ರಭು ನಾಗರಾಜ್ ಅವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC