ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿಯೊಬ್ಬರು ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ನಡೆದಿದೆ.
ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸಜ್ಜದ್ ಅವರ ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿದ್ದರು. ನೀರಿನಲ್ಲಿ ಮುಳುಗಿ ವಾಪಸ್ಸು ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಅವರು ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx