nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    ರಾಜ್ಯ ಸುದ್ದಿ January 12, 2026

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    By adminJanuary 12, 2026No Comments3 Mins Read
    bvs

    ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಕರ್ನಾಟಕದ ವತಿಯಿಂದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಲೋಚನೆಗಳು ಹಾಗೂ ಮಹಾತ್ಮ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರ ಸಂಕಿರಣ ನಡೆಯಿತು.

    ವಿಚಾರ ಸಂಕಿರಣದ ಮುಖ್ಯ ವಿಷಯವಾಗಿ “ಒಳ ಮೀಸಲಾತಿಯ ಒಳಸುಳಿ ಹಾಗೂ ಮೀಸಲಾತಿಯ ಮುನ್ನೋಟ” ಕುರಿತು ವಿಸ್ತೃತ ಮತ್ತು ಗಂಭೀರ ಚರ್ಚೆಗಳು ನಡೆಯುವ ಮೂಲಕ ಸಾಮಾಜಿಕ ನ್ಯಾಯದ ವಿವಿಧ ಆಯಾಮಗಳನ್ನು ಅನಾವರಣಗೊಳಿಸಲಾಯಿತು.


    Provided by
    Provided by

    ಪ್ರೊ. ಶ್ರೀನಿವಾಸ್ ಜಿ. ಪ್ರಾಸ್ತಾವಿಕವಾಗಿ ಮಾತಾಡಿ, ಒಳಮೀಸಲಾತಿ ಸಾಮಾಜಿಕ ನ್ಯಾಯದ ಅನಿವಾರ್ಯ ಹಂತ ಎಂದು ಅಭಿಪ್ರಾಯಪಟ್ಟರು. ಅಲೆಮಾರಿ ಸಮುದಾಯಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಕನಿಷ್ಠ ಒಂದು ಶೇಕಡಾ ಮೀಸಲಾತಿ ನೀಡಬೇಕು ಎಂಬ ಸ್ಪಷ್ಟ ಬೇಡಿಕೆಯನ್ನು ಮುಂದಿಟ್ಟ ಅವರು, ನೂರು ಬಿಂದುಗಳ ರೋಸ್ಟರ್ ವ್ಯವಸ್ಥೆಯಲ್ಲಿ ಪ್ರವರ್ಗ ಎ, ಬಿ ಮತ್ತು ಸಿಗಳಿಗೆ ಕ್ರಮಬದ್ಧವಾಗಿ ಅವಕಾಶ ಕಲ್ಪಿಸುವಂತೆ ರೋಸ್ಟರ್‌ನಲ್ಲಿ ಸ್ಪಷ್ಟ ಹೆಸರೀಕರಣ ಮಾಡಬೇಕೆಂದು ಒತ್ತಾಯಿಸಿದರು. ರೋಸ್ಟರ್ ವ್ಯವಸ್ಥೆ ಪಾರದರ್ಶಕವಾಗಿರದೆ ಹೋದರೆ ಮೀಸಲಾತಿಯ ಉದ್ದೇಶವೇ ವಿಫಲವಾಗುತ್ತದೆ ಎಂದು ಅವರು ಎಚ್ಚರಿಸಿದರು.

    ಪ್ರಮುಖ ವಿಚಾರವಾಗಿ, ಕೆನೆಪದರ (Creamy Layer) ವ್ಯವಸ್ಥೆಯನ್ನು ಎಸ್‌ ಸಿ-–ಎಸ್‌ ಟಿ ಸಮುದಾಯಗಳಿಗೆ ಅನ್ವಯಿಸಬಾರದು ಎಂದು ಅವರು ಸ್ಪಷ್ಟಪಡಿಸಿದರು. ಜೊತೆಗೆ ಪ್ರಿಫರೆನ್ಶಿಯಲ್ ಸಿಸ್ಟಮ್ ಹಾಗೂ ಕ್ಯಾರಿ ಫಾರ್ವರ್ಡ್ ಸಿಸ್ಟಮ್ ಅನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು. ಪರಿಶಿಷ್ಟ ಜಾತಿ–ಪಂಗಡಗಳ ಒಳಗೆಯೇ ನಾಲ್ಕು ಉಪಗುಂಪುಗಳಾಗಿ ವರ್ಗೀಕರಿಸಿ ಒಳಮೀಸಲಾತಿ ನೀಡಬೇಕು ಎಂಬ ಅಭಿಪ್ರಾಯವನ್ನೂ ಮಂಡಿಸಿದರು ಜೊತೆಗೆ, ಆದಿ ಆಂದ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಎಂಬ ಪದಗಳು ಜಾತಿ ಸೂಚಕಗಳಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇವುಗಳು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿರುವ ಕಾರಣದಿಂದ ಕೆಲವರು ಈ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ ಅವರು, ಸರ್ಕಾರವು ಈ ಮೂರು ಪದಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತಕ್ಷಣವೇ ತೆಗೆಯಬೇಕು ಎಂದು ಆಗ್ರಹಿಸಿದರು. ಇದರಿಂದ ಸಂಬಂಧಪಟ್ಟವರು ತಮ್ಮ ಮೂಲ ಜಾತಿಯನ್ನು ನಮೂದಿಸಿ ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾಗಲಿದ್ದು, ಮೀಸಲಾತಿಯ ದುರುಪಯೋಗವನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    ಸದಾಶಿವ ಆಯೋಗ ಮತ್ತು ನಾಗಮೋಹನ್ ದಾಸ್ ಸಮಿತಿ ವಿಶ್ಲೇಷಣೆ:

    ಭೀಮಾಶಂಕರ್ ಅವರು ಮಾತನಾಡಿ, ಎ.ಜೆ. ಸದಾಶಿವ ಆಯೋಗವು ಜಾತಿ ಆಧಾರಿತವಾಗಿ ಒಳಮೀಸಲಾತಿಯನ್ನು ವಿಶ್ಲೇಷಿಸಿದ್ದು, ನಾಗಮೋಹನ್ ದಾಸ್ ಸಮಿತಿಯು ವರ್ಗ ಮತ್ತು ವರ್ಗೀಕರಣ ಆಧಾರದಲ್ಲಿ ಅಧ್ಯಯನ ನಡೆಸಿದೆ ಎಂದು ವಿವರಿಸಿದರು. ಜೊತೆಗೆ ಎಸ್‌ ಸಿಪಿ -– ಟಿಎಸ್ಪಿ ಅನುದಾನ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂಬುದರ ಬಗ್ಗೆ ಆತಂಕ ವ್ಯಕ್ತಪಡಿಸಿ, ಅದರ ಸಮರ್ಪಕ ಬಳಕೆಗೆ ವ್ಯವಸ್ಥೆ ರೂಪಿಸಬೇಕೆಂದು ಹೇಳಿದರು.

    ಮೀಸಲಾತಿ ಬಗ್ಗೆ ತಪ್ಪು ಪ್ರಚಾರ:  ರುದ್ರಯ್ಯ

    ರುದ್ರಯ್ಯ ಅವರು ಮಾತನಾಡಿ,“ಸ್ವಾತಂತ್ರ್ಯ ಬಂದ ತಕ್ಷಣದಿಂದಲೇ ಎಲ್ಲರಿಗೂ ಮೀಸಲಾತಿ ಸಿಕ್ಕಿತು ಎನ್ನುವುದು ತಪ್ಪು. ಸ್ವಾತಂತ್ರ್ಯದ ಸುಮಾರು ಐವತ್ತು ವರ್ಷಗಳ ನಂತರ ಮಾತ್ರ ಎಸ್‌ಸಿ–ಎಸ್‌ಟಿ–ಒಬಿಸಿ ಸಮುದಾಯಗಳಿಗೆ ಮೀಸಲಾತಿ ಪ್ರಾಯೋಗಿಕವಾಗಿ ಲಭಿಸಲು ಆರಂಭವಾಯಿತು. ಈಗ ಒಂದೇ ತಲೆಮಾರಿನಲ್ಲಿ ಹೆಚ್ಚು ಜನ ವಿದ್ಯಾವಂತರಾಗಿರುವುದರಿಂದ ಮೀಸಲಾತಿಯ ಪ್ರಯೋಜನ ಕಾಣುತ್ತಿದೆ” ಎಂದು ಹೇಳಿದರು. ಎದುರಾಗಿರುವ ಸಮಸ್ಯೆಗಳನ್ನು ನಾವು ನಮ್ಮೊಳಗೇ ಬಗೆಹರಿಸಿಕೊಂಡು ಮುಂದೆ ಸಾಗಬೇಕು ಎಂದು ಕರೆ ನೀಡಿದರು.

    ಒಗ್ಗಟ್ಟಿನ ಅಗತ್ಯ : ಹರಿರಾಮ್

    ಹರಿರಾಮ್ ಅವರು ಮಾತನಾಡಿ, “ಒಳಗಿನಿಂದಲೇ ನಮ್ಮೊಳಗೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ಕೆಲವರು ಹೊಲೆಯರು–ಮಾದಿಗರು ನಡುವೆ ಭೇದ ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಸರ್ಕಾರಗಳು ನಮ್ಮನ್ನು ವಿಭಜಿಸಲು ಪ್ರಯತ್ನ ಮಾಡುತ್ತಿವೆ. ಇದನ್ನು ಅರ್ಥ ಮಾಡಿಕೊಂಡು ಎಲ್ಲರೂ ಒಟ್ಟಾಗಿ ನಿಲ್ಲಬೇಕು, ನಮಗೆ ಬೇಕಾದ ಹಕ್ಕುಗಳನ್ನು ಒಗ್ಗಟ್ಟಿನಿಂದ ಪಡೆಯಬೇಕು” ಎಂದು ಹೇಳಿದರು.

    ಸಮೀಕ್ಷೆ ಎಲ್ಲರಿಗೂ ಆಗಲಿ –ಮನೋರಂಜಿನಿ

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮನೋರಂಜಿನಿ ಅವರು, “ಸಮೀಕ್ಷೆ ಎಂದರೆ ಸದಾ ನಮ್ಮ ಮೇಲೆಯೇ ಯಾಕೆ? ನಮಗೆ ಏನು ಇಲ್ಲ ಎಂದು ಹೇಳಲಾಗುತ್ತದೆ. ಹಾಗಾದರೆ ಮೇಲ್ವರ್ಗದವರ ಬಳಿ ಎಷ್ಟು ಭೂಮಿ, ಎಷ್ಟು ಉದ್ಯೋಗ, ಎಷ್ಟು ಅಧಿಕಾರ ಸ್ಥಾನಗಳಿವೆ ಎಂಬುದರ ಮೇಲೂ ಸಮೀಕ್ಷೆ ನಡೆಯಲಿ. ಆಗ ಯಾರು ಏನು ಪಡೆದಿದ್ದಾರೆ ಎಂಬ ಸತ್ಯ ಹೊರಬರುತ್ತದೆ” ಎಂದು ಹೇಳಿದರು.

    ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿಗೆ ಒತ್ತಾಯ:

    ಅಲೆಮಾರಿ ಸಮುದಾಯದ ಪ್ರತಿನಿಧಿ ಲೋಹಿತ್ ಅವರು ಮಾತನಾಡಿ, “ಅಲೆಮಾರಿ ಸಮುದಾಯಕ್ಕೆ ಕನಿಷ್ಠ ಒಂದು ಶೇಕಡಾ ಮೀಸಲಾತಿ ನೀಡುವಂತೆ ಸರ್ಕಾರದ ಮೇಲೆ ಒತ್ತಾಯ ಹಾಕಬೇಕು. ಈ ವಿಚಾರದಲ್ಲಿ ಎಲ್ಲರೂ ನಮ್ಮೊಂದಿಗೆ ನಿಲ್ಲಬೇಕು” ಎಂದು ಮನವಿ ಮಾಡಿದರು.

    ಒಳ ಮೀಸಲಾತಿ ವಿಚಾರದಿಂದ ಮಾದಿಗ–ಹೊಲೆಯ ಸಮುದಾಯಗಳ ನಡುವೆ ಬಿರುಕು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆತಂಕ ವ್ಯಕ್ತವಾಯಿತು. ಈ ಹಿನ್ನೆಲೆ, ಎಲ್ಲ ಸಮುದಾಯಗಳನ್ನು ಒಂದಾಗಿಸಿ ಸಾಮಾಜಿಕ ಏಕತೆಯನ್ನು ಕಾಪಾಡುವುದು ಭಾರತೀಯ ವಿದ್ಯಾರ್ಥಿ ಸಂಘದ ಪ್ರಮುಖ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.