ಚಿತ್ರದುರ್ಗ: ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ, ಮನೆ ಸುಟ್ಟು ಭಸ್ಮವಾಗಿ ಕುಟುಂಬ ಬೀದಿಪಾಲಾದ ಘಟನೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆದಿವಾಲ ಬಿ ಬ್ಲಾಕ್ ನಲ್ಲಿ ನಡೆದಿದೆ.
ಚಂದ್ರಶೇಖರ್ ಹಾಗೂ ಮಹದೇವಮ್ಮ ಎಂಬವರು ಈ ಮನೆಯಲ್ಲಿ ವಾಸಿಸುತ್ತಿದ್ದು, ದಿನ ಕೂಲಿಯಿಂದ ಜೀವನ ನಡೆಸುತ್ತಿದ್ದಾರೆ. ಚಂದ್ರಶೇಖರ್, ಮಹದೇವಮ್ಮ ಹಾಗೂ ಮಗ ರಾಧಾಕೃಷ್ಣನ್ ಎಲ್ಲರೂ ಕೆಲಸಕ್ಕಾಗಿ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಬೆಂಕಿ ಬಿದ್ದಿದ್ದು, ಮನೆ ಸುಟ್ಟು ಭಸ್ಮವಾಗಿದೆ.
ಇನ್ನೂ ಘಟನೆಯ ಮಾಹಿತಿ ತಿಳಿದು ತಾಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಡಿ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ, ಅತೀ ಶೀಘ್ರದಲ್ಲಿ ಸರ್ಕಾರದಿಂದ ಮನೆ ಮಂಜೂರು ಮಾಡಿಸುವುದಾಗಿ ತಿಳಿಸಿದರು.
ಇನ್ನೂ ಮನೆಕಳೆದುಕೊಂಡು ನಿರಾಶ್ರಿತರಾಗಿರುವ ಕುಟುಂಬಕ್ಕೆ ಸರ್ಕಾರ ತಕ್ಷಣವೇ ಮನೆ ಮಂಜೂರು ಮಾಡಿಕೊಡಬೇಕು, ನೊಂದ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆದಿವಾಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ)
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB