ಹುಕ್ಕೇರಿ : ಬೆನ್ನು ನೋವು, ಸೊಂಟ ನೋವಿನಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಶಿರಗಾಂವ ಗ್ರಾಮದಲ್ಲಿ ನಡೆದಿದೆ.
ಈರಪ್ಪ ರಾಯಪ್ಪ ಚೌಗಲಾ (41) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಸ್ಥಳೀಯ ಅವರಗೋಳ ಗ್ರಾಮದ ಖಾಸಗಿ ಬ್ಯಾಂಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಈರಪ್ಪ ಚೌಗಲಾ ಬಹಳ ದಿನಗಳಿಂದ ಬೆನ್ನು ನೋವು, ಸೊಂಟ ನೋವಿನಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಈರಪ್ಪನಿಗೆ ಎರಡು ಹೆಣ್ಣು ಮಕ್ಕಳು ಒಂದು ಗಂಡು ಮಗು ಇದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಘಟನೆ ಸಂಬಂಧ ಹುಕ್ಕೇರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


