ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ₹7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
‘ಬೆಸ್ಕಾಂ ಕಾರ್ಯಾಚರಣೆ (ಎಲೆಕ್ನಿಕಲ್) ವಿಭಾಗದ ಎಂ.ಎಲ್. ನಾಗರಾಜ್ ಪರವಾಗಿ ಚಾಲಕ ಮುರುಳಿಕೃಷ್ಣ ₹7.50 ಲಕ್ಷ ಲಂಚ ಪಡೆಯುತ್ತಿದ್ದರು. ಅದೇ ಸಂದರ್ಭದಲ್ಲಿ ದಾಳಿ ಮಾಡಿ ಪುರಾವೆ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.


