ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–1ಕ್ಕೆ ಸಂಬಂಧಿಸಿದಂತೆ ನಗರದ ಕೋತಿ ತೋಪು ಹೊರಪೇಟೆ ವೃತ್ತದಲ್ಲಿ ಡಿಸೆಂಬರ್ 21ರ ಮಧ್ಯಾಹ್ನ 3 ಗಂಟೆಗೆ ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಕೋರಾ, ಸಿಟಿ ಕೆರೆ, ಬೆಳ್ಳಾವಿ ಶಾಖೆ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಹಕರು ಸಂವಾದ ಸಭೆಯಲ್ಲಿ ಪಾಲ್ಗೊಂಡು ತಮ್ಮ ದೂರು ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಯನಗರದಲ್ಲಿಂದು ಗ್ರಾಹಕ ಸಂವಾದ ಸಭೆ
ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ನಗರದ ಜಯನಗರದಲ್ಲಿರುವ ಉಪವಿಭಾಗ ಕಚೇರಿಯಲ್ಲಿ ಡಿಸೆಂಬರ್ 21ರ ಮಧ್ಯಾಹ್ನ 3 ಗಂಟೆಗೆ ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೆಹಬೂಬ್ ಷರೀಫ್ ತಿಳಿಸಿದ್ದಾರೆ.
ಎಸ್.ಎಸ್.ಪುರಂ, ಸರಸ್ವತಿ ಪುರಂ, ಜಯನಗರ ಹಾಗೂ ಸುತ್ತಮುತ್ತಲಿನ ಗ್ರಾಹಕರು ಸಂವಾದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕುಂದು–ಕೊರತೆ ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx