ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–2, ನಗರ ಉಪವಿಭಾಗ–2ಕ್ಕೆ ಸಂಬಂಧಿಸಿದಂತೆ ಮಾರ್ಚ್ 15ರಂದು ಮಧ್ಯಾಹ್ನ 3 ರಿಂದ 5:30 ಗಂಟೆವರೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.
ಭೀಮಸಂದ್ರ ನಗರ ಹಾಗೂ ಹೆಗ್ಗೆರೆ, ಮಲ್ಲಸಂದ್ರ, ದೊಡ್ಡನಾರವಂಗಲ, ಗೂಳೂರು, ಹೆತ್ತೇನಹಳ್ಳಿ, ಹೊಳಕಲ್, ನಾಗವಲ್ಲಿ, ಕಣಕುಪ್ಪೆ, ಗಂಗೋನಹಳ್ಳಿ, ಅರಿಯೂರು, ಹೆಬ್ಬೂರು ಗಳಿಗೇನಹಳ್ಳಿ, ಬಳ್ಳಗೆರೆ, ನಿಡುವಳಲು, ಸಿರಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಹಕರಿಗಾಗಿ ಹೊರಪೇಟೆಯ ಬೆಸ್ಕಾಂ ಉಪವಿಭಾಗ ಕಚೇರಿ; ಎಸ್ಎಸ್ಪುರಂ, ಸರಸ್ವತಿಪುರಂ ಮತ್ತು ಜಯನಗರ ವ್ಯಾಪ್ತಿಯ ಗ್ರಾಹಕರಿಗಾಗಿ ಜಯನಗರದಲ್ಲಿರುವ ನಗರ ಉಪವಿಭಾಗ–2ರ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದ್ದು, ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4